ಕೋವಿಡ್-19: ರಾಜ್ಯದಲ್ಲಿ 7 ಕೋಟಿ ಡೋಸ್ ಲಸಿಕೆ ವಿತರಣೆ
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 2.83ಲಕ್ಷ ಡೋಸ್ ಕೋವಿಡ್ ಲಸಿಕೆಗಳನ್ನು ವಿತರಿಸಲಾಗಿದ್ದು, ಇದರೊಂದಿಗೆ ಈವರೆಗೆ ರಾಜ್ಯದಲ್ಲಿ ನೀಡಲಾದ ಒಟ್ಟು ಡೋಸ್‌ಗಳ ಸಂಖ್ಯೆ 7 ಕೋಟಿಯ ಗಡಿ ದಾಟಿದೆ.

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 2.83ಲಕ್ಷ ಡೋಸ್ ಕೋವಿಡ್ ಲಸಿಕೆಗಳನ್ನು ವಿತರಿಸಲಾಗಿದ್ದು, ಇದರೊಂದಿಗೆ ಈವರೆಗೆ ರಾಜ್ಯದಲ್ಲಿ ನೀಡಲಾದ ಒಟ್ಟು ಡೋಸ್‌ಗಳ ಸಂಖ್ಯೆ 7 ಕೋಟಿಯ ಗಡಿ ದಾಟಿದೆ.
ಶನಿವಾರ ಸಂಜೆ 6 ಗಂಟೆ ವೇಳೆಗೆ 2.83 ಲಕ್ಷ ಡೋಸ್ ಲಸಿಕೆ ನೀಡಲಾಗಿತ್ತು. ಈ ಮೂಲಕ ಒಟ್ಟು ಲಸಿಕೆ ಪ್ರಮಾಣ 7,01,99,026 ಡೋಸ್ ತಲುಪಿದೆ.
ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ 4.83 ಕೋಟಿ ಮಂದಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. ಈ ಪೈಕಿ ಶೇ.90.41 ರಷ್ಟು ಮಂದಿಗೆ ಅಂದರೆ 4,36,71,680 ಮಂದಿಗೆ ಮೊದಲ ಡೋಸ್, ಶೇ.54.92ರಷ್ಟು ಮಂದಿಗೆ ಎರಡೂ ಡೋಸ್ ಲಸಿಕೆ ನೀಡಲಾಗಿದ್ದು, 2,65,27,346 ಮಂದಿ ಎರಡೂ ಡೋಸ್ ಲಸಿಕೆ ಪಡೆದಂತಾಗಿದೆ.
ರಾಜ್ಯ ಸರ್ಕಾರವು ನವೆಂಬರ್ ಅಂತ್ಯದ ವೇಳೆಗೆ ಕನಿಷ್ಠ ಒಂದು ಡೋಸ್ ಮತ್ತು ಡಿಸೆಂಬರ್ ಅಂತ್ಯದ ವೇಳೆಗೆ ಎರಡೂ ಡೋಸ್‌ಗಳಲ್ಲಿ ಶೇಕಡಾ 75 ರಷ್ಟು ಅರ್ಹ ವಯಸ್ಕ ಜನಸಂಖ್ಯೆಗೆ ಲಸಿಕೆ ಹಾಕುವ ಗುರಿಯನ್ನು ಹೊಂದಿದ್ದು, ಈ ನಡುವಲ್ಲೇ 7 ಕೋಟಿ ಡೋಸ್ ಲಸಿಕೆ ನೀಡುವ ಮೂಲಕ ಹೊಸ ಮೈಲಿಗಲ್ಲನ್ನು ಸಾಧಿಸಿದೆ.
ಎಲ್ಲಾ ವಯಸ್ಕರಿಗೂ ವರ್ಷಾಂತ್ಯದ ವೇಳೆಗೆ ಲಸಿಕೆ ಹಾಕಲು ಎಲ್ಲಾ ರೀತಿಯ ಪ್ರಯತ್ನಗಳನ್ನೂ ಮಾಡಲಾಗುತ್ತದೆ. ಜನರು ಹಿಂಜರಿಕೆ ಇಲ್ಲದೆ ಎರಡನೇ ಡೋಸ್ ಲಸಿಕೆ ಪಡೆದುಕೊಳ್ಳಲು ಮುಂದೆ ಬರಬೇಕೆಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.
ಎನ್‌ಜಿಒಗಳು ಮತ್ತು ಆಶಾ ಕಾರ್ಯಕರ್ತರೊಂದಿಗೆ ರಾಜ್ಯ ಸರ್ಕಾರ ಕೈಜೋಡಿಸಿದ್ದು, 'ಹರ್ ಘರ್ ದಸ್ತಕ್' ಅಭಿಯಾನದ ಭಾಗವಾಗಿ ಪ್ರತೀ ಮನೆಯ ಬಾಗಿಲಿಗೆ ಹೋಗಿ ಅರ್ಹ ವ್ಯಕ್ತಿಗಳು ಎರಡನೇ ಡೋಸ್ ಲಸಿಕೆ ಪಡೆದುಕೊಳ್ಳುವಂತೆ ಮನವೊಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಮುಖ್ಯವಾಗಿ ಜನರಲ್ಲಿರುವ ಲಸಿಕೆ ಕುರಿತು ಇರುವ ತಪ್ಪು ಗ್ರಹಿಕೆಗಳನ್ನು ಹೋಗಲಾಡಿಸಲು, ರಾಜ್ಯ ಸರ್ಕಾರವು ಸ್ಥಳೀಯ ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರು, ಧಾರ್ಮಿಕ ಮತ್ತು ಪ್ರಭಾವಿ ಮುಖಂಡರು ಮತ್ತು ತಾಲ್ಲೂಕು ಅಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದು, ಜನರ ಮನವೊಲಿಸುವಂತೆ ಮಾತುಕತೆ ನಡೆಸಲಾಗುತ್ತಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


