ಗದಗದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ದುರ್ಮರಣ, ಮಹಿಳೆ ಸ್ಥಿತಿ ಗಂಭೀರ!
ಕಾರ್ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಗದಗ: ಕಾರ್ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.
ಗದಗದ ಮುಂಡರಗಿ ತಾಲೂಕಿನ ಡಂಬಳ-ಮೇವುಂಡಿ ಬಳಿ ಅಪಘಾತ ಸಂಭವಿಸಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಒಬ್ಬರ ಸ್ಥಿತಿ ಗಂಭೀರವಾಗಿದೆ.

ಮೃತರನ್ನು 45 ವರ್ಷದ ಶಿವಾನಂದಯ್ಯ ಹಿರೇಮಠ. 70 ವರ್ಷದ ಅನಸೂಯಾ ಮತ್ತು 6 ವರ್ಷದ ಮನಸ್ವಿ ಮೃತ ದುರ್ದೈವಿಗಳು. ಶಿವಾನಂದಯ್ಯ ಪತ್ನಿ ಗಿರಿಜಾ ಸ್ಥಿತಿ ಚಿಂತಾಜನಕವಾಗಿದೆ.
ವೇಗವಾಗಿ ಚಲಿಸುತ್ತಿದ್ದಾ ಕಾರು ಟ್ರ್ಯಾಕ್ಟರ್ ಹಿಂಬದಿಗೆ ಡಿಕ್ಕಿ ಹೊಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


