ಕೋಲಾರದಲ್ಲಿ ಭಾರಿ ಮಳೆಯಿಂದ ಬೆಳೆ ಹಾನಿ; ಪರಿಶೀಲನೆ ನಡೆಸಿದ ಸಿಎಂ ಬೊಮ್ಮಾಯಿ
ಭಾರಿ ಮಳೆಯಿಂದಾಗಿ ಕೋಲಾರ ಜಿಲ್ಲೆಯಲ್ಲಿ ಸಂಭವಿಸಿದ ಬೆಳೆ ಹಾನಿ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.

ಕೋಲಾರ: ಭಾರಿ ಮಳೆ (heavy rain)ಯಿಂದಾಗಿ ಕೋಲಾರ ಜಿಲ್ಲೆಯಲ್ಲಿ ಸಂಭವಿಸಿದ ಬೆಳೆ ಹಾನಿ (crop loss) ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.
ಭಾರೀ ಮಳೆಯಿಂದ ಕೋಲಾರ ಜಿಲ್ಲೆಯಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಮಳೆ ಹಾನಿಯ ಬಗ್ಗೆ ಚರ್ಚಿಸಲು ಸಭೆ ಕರೆದು ಸಭೆ ಮಾಡಿ ಕೆಲವು ಕ್ರಮಗಳನ್ನು ಕೈಗೊಂಡರು. ಅಂತೆಯೇ ಇಂದೂ ಸಹ ಕೋಲಾರ ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಗಳಿಗೆ ತೆರಳಿದ ಸಿಎಂ ಬೊಮ್ಮಾಯಿ ಪರಿಶೀಲನೆ ನಡೆಸಿದರು. ಈ ವೇಳೆ ಕೋಲಾರ ಡಿಸಿ ಸೆಲ್ವಮಣಿ (DC Selvamani) ಮತ್ತು ಇತರೆ ಅಧಿಕಾರಿಗಳ ತಂಡ ಅವರಿಗೆ ಮಾಹಿತಿ ನೀಡಿದರು.
ಕೋಲಾರ ಜಿಲ್ಲೆಯ ನರಸಾಪುರದ ರೈತ ಅಪ್ಪಣ್ಣರ ರಾಗಿ ಹೊಲಕ್ಕೆ, ಚೌಡದೇನಹಳ್ಳಿ ಗ್ರಾಮದ ಜಗದೀಶ್ ಅವರ ತೋಟಕ್ಕೆ, ಕಲ್ವಮಂಜಲಿಯ ಯಶೋದಮ್ಮ ಹೊಲಕ್ಕೆ ಸಿಎಂ ಭೇಟಿ ನೀಡಿದ್ದಾರೆ. ಹೂ ಹಾಗೂ ಕೊತ್ತಂಬರಿ ಸೊಪ್ಪಿನ ತೋಟಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿ ಡಾ. ಆರ್ ಸೆಲ್ವಮಣಿ ಬಳಿ ಮಾಹಿತಿ ಪಡೆದಿದ್ದಾರೆ.
ಇದನ್ನೂ ಓದಿ: ಭಾರಿ ಮಳೆ: ಭದ್ರಾವತಿ ಜಲಾಶಯದಿಂದ ನೀರು ಬಿಡುಗಡೆ: ಆತಂಕದಲ್ಲಿ ಮುಂಡರಗಿ ರೈತರು
ಕೋಲಾರ ಜಿಲ್ಲೆಯಲ್ಲಿ 48 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ರಾಗಿ, ನೆಲಗಡಲೆ, ತೊಗರಿ, ಮುಸಕಿನ ಜೋಳ ಬೆಳೆ ಹಾನಿಯಾಗಿದೆ. ಸುಮಾರು 7000 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳು ಹಾನಿಯಾಗಿವೆ. ಕೋಲಾರ ತಾಲೂಕಿನ ಹಲವು ಗ್ರಾಮಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ರಾಗಿ, ಹೂವು, ಟೊಮ್ಯಾಟೊ, ಕ್ಯಾರೆಟ್, ಶುಂಠಿ, ಬೀಟ್‌ರೂಟ್ ತೋಟಗಳಿಗೆ ಸಿಎಂ ಭೇಟಿ ನೀಡಿ ನಷ್ಟದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ಸೇರಿ ಒಟ್ಟು 70 ಕೋಟಿ ರೂ ನಷ್ಟ ಉಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಇನ್ನು ಸಿಎಂ ಬೊಮ್ಮಾಯಿ ಅವರಿಗೆ ಸಂಸದ ಮುನಿಸ್ವಾಮಿ, ಸಚಿವ ಮುನಿರತ್ನ ಸಾಥ್ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


