ಕೋವಿಡ್-19: ರಾಜ್ಯದಲ್ಲಿಂದು 178 ಹೊಸ ಪ್ರಕರಣ ಪತ್ತೆ, 373 ಚೇತರಿಕೆ, 2 ಸಾವು
ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 178 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,93,777ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 178 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,93,777ಕ್ಕೆ ಏರಿಕೆಯಾಗಿದೆ.
373 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 6867 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿನಿಂದ ಇಂದು ಇಬ್ಬರು ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ 38,177 ಏರಿಕೆಯಾಗಿದೆ. ಒಟ್ಟು ಸೋಂಕಿನ ಸಂಖ್ಯೆ ಶೇ. 0.31 ರಷ್ಟಿದ್ದು,ಮರಣ ಪ್ರಮಾಣ ಶೇ. 1. 12 ರಷ್ಟಿದೆ. ಬೆಂಗಳೂರಿನಲ್ಲಿ 112 ಸೋಂಕಿತರು ಪತ್ತೆಯಾಗಿದ್ದು, 300 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಸಾವನ್ನಪ್ಪಿದ್ದಾರೆ.
ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಗದಗ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


