ಕೋವಿಡ್-19: ರಾಜ್ಯದಲ್ಲಿ ಇಂದು 254 ಹೊಸ ಸೋಂಕು ಪ್ರಕರಣಗಳು ಪತ್ತೆ, ಮೂರು ಸಾವು!
ರಾಜ್ಯದಲ್ಲಿ ಮಾರಕ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 254 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಬೆಂಗಳೂರು: ರಾಜ್ಯದಲ್ಲಿ ಮಾರಕ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 254 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 254 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಈ ವರೆಗೂ ಪತ್ತೆಯಾದ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 29,94,255ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು ಕೋರೋನಾದಿಂದಾಗಿ ಮೂವರು ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್ ಗೆ ಬಲಿಯಾದವರ ಸಂಖ್ಯೆ 38,185ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 546 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಗುಣಮುಖರ ಸಂಖ್ಯೆ 29,49,629ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 6,412ಕ್ಕೆ ಕುಸಿದಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು 152 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಂದು ಸಾವು ವರದಿಯಾಗಿದೆ. ಆ ಮೂಲಕ ಬೆಂಗಳೂರಿನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 12,55,440ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 16,326ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 464 ಮಂದಿ ಸೋಂಕಿತರು ಗುಣಮುಖರಾಗಿದ್ದು, ನಗರದಲ್ಲಿ ಒಟ್ಟಾರೆ ಗುಣಮುಖರ ಪ್ರಮಾಣ 12,33,996ಕ್ಕೆ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


