ಮಕ್ಕಳಲ್ಲಿ ಅಪೌಷ್ಟಿಕತೆ: ಡಿಸೆಂಬರ್ನಿಂದ ಬಿಸಿಯೂಟದ ವೇಳೆ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಲು ನಿರ್ಧಾರ
ಮಕ್ಕಳಲ್ಲಿ ಅಪೌಷ್ಟಿಕತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡಿಸೆಂಬರ್ ತಿಂಗಳಿನಿಂದ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಲು ನಿರ್ಧರಿಸಿದೆ.

ಬೆಂಗಳೂರು: ಮಕ್ಕಳಲ್ಲಿ ಅಪೌಷ್ಟಿಕತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡಿಸೆಂಬರ್ ತಿಂಗಳಿನಿಂದ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಲು ನಿರ್ಧರಿಸಿದೆ.
ಯಾದಗಿರಿ, ಕಲಬುರಗಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್ ಮತ್ತು ವಿಜಯಪುರ ಜಿಲ್ಲೆಯ 7 ಜಿಲ್ಲೆಗಳಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು ಈ ಹಿನ್ನೆಲೆಯಲ್ಲಿ ಹೀಗೆ ನಿರ್ಧಾರ ಕೈಗೊಳ್ಳಲಾಗಿದೆ. ಎಲ್ಲರಿಗೂ ಮೊಟ್ಟೆ ವಿತರಿಸಲಾಗುತ್ತದೆ. ಯಾರೂ ಮೊಟ್ಟೆ ತಿನ್ನುವುದಿಲ್ಲವೋ ಅವರಿಗೆ ಬಾಳೆಹಣ್ಣನ್ನು ನೀಡಲಾಗುತ್ತದೆ.
ಕೆಲವು ಜಿಲ್ಲೆಗಳಲ್ಲಿ ಶೇಕಡಾ 70ಕ್ಕಿಂತಲೂ ಹೆಚ್ಚು ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ ಕಂಡುಬಂದಿದೆ. 14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಅಪೌಷ್ಟಿಕತೆ ಹಿನ್ನೆಲೆ ಮೊಟ್ಟೆ, ಬಾಳೆಹಣ್ಣು ವಿತರಣೆಗೆ ನಿರ್ಧಾರ ಮಾಡಲಾಗಿದೆ.
ಯಾದಗಿರಿ ಜಿಲ್ಲೆಯಲ್ಲಿ ಶೇಕಡಾ 74, ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 72.4, ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 72.3, ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 70.7, ರಾಯಚೂರು ಜಿಲ್ಲೆಯಲ್ಲಿ ಶೇಕಡಾ 70.6, ಬೀದರ್ ಜಿಲ್ಲೆಯಲ್ಲಿ ಶೇಕಡಾ 69.1, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 68 ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ ಕಂಡುಬಂದಿದೆ.
ಏಳು ಜಿಲ್ಲೆಗಳ 14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆಯಿಂದಲೂ ಬಳಲುತ್ತಿರುವ ಬಗ್ಗೆ ತಿಳಿದುಬಂದಿದೆ. ಅಪೌಷ್ಟಿಕತೆ ರಕ್ತಹೀನತೆ ಬಳಲುವಿಕೆ ಹಿನ್ನೆಲೆಯಲ್ಲಿ ಡಿಸೆಂಬರ್ ನಿಂದ ಮೊಟ್ಟೆ ಬಾಳೆಹಣ್ಣು ವಿತರಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


