ರಾಜ್ಯ

ರಾಜ್ಯದಲ್ಲಿ ಕೊರೋನಾ ನಿನ್ನೆಗಿಂತ ಇಂದು ಹೆಚ್ಚಳ; ಬೆಂಗಳೂರಿನಲ್ಲಿ 171, ರಾಜ್ಯದಲ್ಲಿ 306 ಪ್ರಕರಣ: 2 ಸಾವು 

ರಾಜ್ಯದಲ್ಲಿ ಮಾರಕ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 306 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ ಕೊರೋನಾ ನಿನ್ನೆಗಿಂತ ಇಂದು ಹೆಚ್ಚಳ; ಬೆಂಗಳೂರಿನಲ್ಲಿ 171, ರಾಜ್ಯದಲ್ಲಿ 306 ಪ್ರಕರಣ: 2 ಸಾವು 
ಕೋವಿಡ್-19 ತಪಾಸಣೆ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಮಾರಕ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 306 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಪತ್ತೆಯಾಗಿರುವ ಹೊಸ ಸೋಂಕು ಪ್ರಕರಣಗಳ ಮೂಲಕ ಮೂಲಕ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 29,94,561ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು ಕೋರೋನಾದಿಂದಾಗಿ 2  ಸೋಂಕಿತರು ಸಾವನ್ನಪ್ಪಿದ್ದು, ಕೋವಿಡ್ ಗೆ ಬಲಿಯಾದವರ ಸಂಖ್ಯೆ 38,187 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 224 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಸಂಖ್ಯೆ 29,49,853ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 6,492ಕ್ಕೆ ಕುಸಿದಿದೆ. 

ರಾಜಧಾನಿ ಬೆಂಗಳೂರಿನಲ್ಲಿ ಇಂದು 171 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಶೂನ್ಯ ಸಾವು ವರದಿಯಾಗಿದೆ. ಬೆಂಗಳೂರಿನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 12,55,611ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 16,326ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 147  ಮಂದಿ ಸೋಂಕಿತರು ಗುಣಮುಖರಾಗಿದ್ದು, ನಗರದಲ್ಲಿ ಒಟ್ಟಾರೆ ಗುಣಮುಖರ ಪ್ರಮಾಣ 12,34,143ಕ್ಕೆ ಏರಿಕೆಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.