ಹಂಪಿ ಪ್ರವಾಸಿ ಮಾರ್ಗದರ್ಶಿಗಳಿಗೆ ಸಂಭಾವನೆ, ಸಾಮಾಜಿಕ ಭದ್ರತೆ ಕೋರಿ ಸಿಎಂಗೆ ಪತ್ರ ಅಭಿಯಾನ!
ಹಂಪಿಯಲ್ಲಿ ನೋಂದಾಯಿತ ಪ್ರವಾಸಿ ಮಾರ್ಗದರ್ಶಿಗಳು ಮಾಸಿಕ ಗೌರವಧನ ನೀಡಬೇಕು ಎಂದು ಆಗ್ರಹಿಸಿ ಗೈಡ್ ಗಳು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಚಳವಳಿ ಆರಂಭಿಸಿದ್ದಾರೆ.

ಹುಬ್ಬಳ್ಳಿ: ಹಂಪಿಯಲ್ಲಿ ನೋಂದಾಯಿತ ಪ್ರವಾಸಿ ಮಾರ್ಗದರ್ಶಿಗಳು ಮಾಸಿಕ ಗೌರವಧನ ನೀಡಬೇಕು ಎಂದು ಆಗ್ರಹಿಸಿ ಗೈಡ್ ಗಳು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಚಳವಳಿ ಆರಂಭಿಸಿದ್ದಾರೆ.
ಗೈಡ್ ಗಳು ಇತ್ತೀಚೆಗೆ ಹಂಪಿಯ ವಿರೂಪಾಕ್ಷ ದೇವಸ್ಥಾನದ ಮುಂದೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದರು. ಪತ್ರ ಬರೆಯುವ ಅಭಿಯಾನವನ್ನು ಪ್ರಾರಂಭಿಸಿದರು. ಈ ಮಾರ್ಗದರ್ಶಕರು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ಗುರುತಿಸಲ್ಪಟ್ಟಿದ್ದರೂ, ಅವರು ಇನ್ನೂ ಮಾಸಿಕ ಸಂಭಾವನೆಗಾಗಿ ಹೋರಾಡುತ್ತಿದ್ದಾರೆ.
'ನಾವು ದೇಶಾದ್ಯಂತ ಪ್ರವಾಸಿಗರನ್ನು ಆಕರ್ಷಿಸುವ ಹಂಪಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ಸರ್ಕಾರ ನಮಗೆ ಸಂಭಾವನೆ ಮತ್ತು ಸಾಮಾಜಿಕ ಭದ್ರತೆಯನ್ನು ನೀಡಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ. ನಮಗೆ ವೈದ್ಯಕೀಯ ರಕ್ಷಣೆ ಅಥವಾ ವಿಮೆ ಇಲ್ಲ. ಹಿಂದಿನ ಮುಖ್ಯಮಂತ್ರಿಗಳು ಆಡಳಿತದ ಸಹಾಯದಿಂದ ನಮಗೆ ವಸತಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಯಾವ ಬೇಡಿಕೆಯೂ ಈಡೇರಿಲ್ಲ' ಎಂದು ಹಂಪಿ ಮಾರ್ಗದರ್ಶಕರ ಸಂಘದ ಸದಸ್ಯರೊಬ್ಬರು ತಿಳಿಸಿದರು.
ನಮ್ಮ ಬೇಡಿಕೆಗಳು ಮತ್ತು ಹಂಪಿ ಮತ್ತು ಇತರ ಪ್ರವಾಸಿ ಸ್ಥಳಗಳಲ್ಲಿ ನಾವು ಎದುರಿಸುತ್ತಿರುವ ಸಮಸ್ಯೆಗಳನ್ನು ಪಟ್ಟಿ ಮಾಡಿದ್ದೇವೆ. ಕರ್ನಾಟಕದ ವಿವಿಧ ಸ್ಥಳಗಳಲ್ಲಿ ನೂರಾರು ಟೂರಿಸ್ಟ್ ಗೈಡ್‌ಗಳಿದ್ದಾರೆ. ಅವರಿಗೆ ಸರ್ಕಾರದ ನೆರವು ಬೇಕಾಗುತ್ತದೆ. ಸರ್ಕಾರವು ನಮ್ಮ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಬೇಕೆಂದು ನಾವು ಬಯಸುತ್ತೇವೆ. ಈ ವಿಷಯವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಸಂಪರ್ಕಿಸಿ ನಮ್ಮ ಸಮಸ್ಯೆಗಳು ಸ್ವಲ್ಪ ಮಟ್ಟಿಗೆ ಬಗೆಹರಿಸುವಂತೆ ಎಂದು ಮನವಿ ಮಾಡುತ್ತೇವೆ ಎಂದರು.
ಮಾರ್ಗದರ್ಶಕರ ಅನುಕೂಲಕ್ಕಾಗಿ ರೂಪಿಸಿರುವ ಬಹುತೇಕ ಯೋಜನೆಗಳು ಸರ್ಕಾರದ ಬಳಿ ಬಾಕಿ ಉಳಿದಿವೆ ಎಂದು ಹಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಸರ್ಕಾರದ ಬಳಿ ಕಡತಗಳು ಬಾಕಿ ಇವೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


