ಬೆಂಗಳೂರು: ಒಂದೇ ಶಾಲೆ 33 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು; ಪೋಷಕರಲ್ಲಿ ಮನೆ ಮಾಡಿದ ಆತಂಕ
ನಗರದ ದೊಮ್ಮಸಂದ್ರದಲ್ಲಿನ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ 33 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ.

ಬೆಂಗಳೂರು: ನಗರದ ದೊಮ್ಮಸಂದ್ರದಲ್ಲಿನ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ 33 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ.
‘ದಿ ಇಂಟರ್‌ನ್ಯಾಷನಲ್ ಸ್ಕೂಲ್ ಬೆಂಗಳೂರು’ ಶಿಕ್ಷಣ ಸಂಸ್ಥೆಯಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಅಲ್ಲಿ ಈವರೆಗೆ ವಿದ್ಯಾರ್ಥಿಗಳು ಸೇರಿದಂತೆ 497 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 8ನೇ ತರಗತಿಯ ಒಬ್ಬ ವಿದ್ಯಾರ್ಥಿ, 9ನೇ ತರಗತಿಯ 12 ವಿದ್ಯಾರ್ಥಿಗಳು, 10ನೇ ತರಗತಿಯ 8 ವಿದ್ಯಾರ್ಥಿಗಳು, 11ನೇ ತರಗತಿಯ 3 ವಿದ್ಯಾರ್ಥಿಗಳು ಹಾಗೂ 12 ತರಗತಿಯ 9 ವಿದ್ಯಾರ್ಥಿಗಳು ಕೋವಿಡ್ ಪೀಡಿತರಾಗಿದ್ದಾರೆ.
32 ವಿದ್ಯಾರ್ಥಿಗಳಿಗೆ ಸಂಸ್ಥೆಯ ವೈದ್ಯಕೀಯ ಕೇಂದ್ರದಲ್ಲಿಯೇ ಆರೈಕೆ ಮಾಡಲಾಗುತ್ತಿದೆ. ಮಹದೇವಪುರ ವಲಯದಲ್ಲಿ ವಾಸವಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿದ್ದವು. ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು. ಕೋವಿಡ್ ಪೀಡಿತರಾಗಿರುವುದು ದೃಢಪಡುತ್ತಿದ್ದಂತೆ ಎಲ್ಲ ನೇರ ಹಾಗೂ ಪರೋಕ್ಷ ಸಂಪರ್ಕಿತರನ್ನು ಪರೀಕ್ಷೆ ಮಾಡಲಾಗಿದೆ.
‘ಶಿಕ್ಷಣ ಸಂಸ್ಥೆಯ ಎಲ್ಲ ಸಿಬ್ಬಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಸೋಂಕಿತರು ಲಕ್ಷಣ ರಹಿತರಾಗಿದ್ದಾರೆ. ಹೀಗಾಗಿ, ಆಸ್ಪತ್ರೆಗೆ ದಾಖಲಿಸಲಿಲ್ಲ. ಸಂಪರ್ಕಿತರಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಶಿಕ್ಷಣ ಸಂಸ್ಥೆಯನ್ನು ಸೀಲ್‌ಡೌನ್ ಮಾಡಲಾಗಿದೆ. ಸೋಂಕಿತ ವಿದ್ಯಾರ್ಥಿಗಳಿಗೆ ಆರೈಕೆ ಒದಗಿಸುತ್ತಿರುವ ಕೇಂದ್ರ ಹಾಗೂ ವಸತಿ ನಿಲಯವನ್ನು ಪ್ರತ್ಯೇಕಿಸಲಾಗಿದೆ’ ಎಂದು ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ. ಶ್ರೀನಿವಾಸ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


