ಕೋವಿಡ್ ಲಸಿಕಾ ಅಭಿಯಾನ ತೀವ್ರಗೊಳಿಸಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ
ಲಸಿಕಾ ಅಭಿಯಾನವನ್ನು ತೀವ್ರಗೊಳಿಸಿ 2ನೇ ಡೋಸ್ ರಾಜದ್ಯ ಸರಾಸರಿಯನ್ನು ಹೆಚ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು: ಲಸಿಕಾ ಅಭಿಯಾನವನ್ನು ತೀವ್ರಗೊಳಿಸಿ 2ನೇ ಡೋಸ್ ರಾಜದ್ಯ ಸರಾಸರಿಯನ್ನು ಹೆಚ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ಕೋವಿಡ್ ಲಸಿಕಾ ಕಾರ್ಯಕ್ರಮದ ಪ್ರಗತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವೀಡಿಯೋ ಸಂವಾದದಲ್ಲಿ ಮಾತನಾಡಿದರು.
ಮೊದಲನೇ ಡೋಸ್‍ನಲ್ಲಿ ರಾಜ್ಯದ ಸರಾಸರಿ ಶೇ. 90 ರಷ್ಟಿದ್ದು, ಎರಡನೇ ಡೋಸ್ ಲಸಿಕೆ ಹಾಕುವುದರಲ್ಲಿ ರಾಜ್ಯದ ಸರಾಸರಿ ಶೇ. 57 ರಷ್ಟಿದೆ. ಡಿಸೆಂಬರ್ ಅಂತ್ಯದೊಳಗೆ 2 ನೇ ಡೋಸ್ ಶೇ. 70 ಕ್ಕೆ ಮುಟ್ಟಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಲಸಿಕೆ ಪ್ರಮಾಣ ಯಾವ ಗ್ರಾಮದಲ್ಲಿ ಕಡಿಮೆ ಇದೆಯೋ, ಯಾವ ಪ್ರದೇಶದಲ್ಲಿ ಲಸಿಕೆ ಹಾಕಿಸಕೊಳ್ಳಲು ಜನ ಹಿಂಜರಿಯುತ್ತಾರೋ ಅಂತಹವರ ಮನವೊಲಿಸಿ ಲಸಿಕೆ ನೀಡುವ ಕೆಲಸವಾಗಬೇಕು. ಇವರನ್ನು ಪ್ರಭಾವಿಸುವ ವ್ಯಕ್ತಿ, ಸಂಸ್ಥೆಗಳನ್ನು ಬಳಸಿಕೊಂಡು ನಿಗದಿತ ಗುರಿ ಸಾಧಿಸಬೇಕು.
ಕೋವಿಡ್ ಅಲೆ ಕಡಿಮೆಯಾಗಿದೆ ಎಂಬ ಭಾವನೆ ಬೇಡ. ಈಗಾಗಲೇ ಮೂರನೇ ಅಲೆ ಆರಂಭದ ಲಕ್ಷಣಗಳು ದೇಶ ಮತ್ತು ರಾಜ್ಯದಲ್ಲಿ ಗೋಚರವಾಗುತ್ತಿದೆ. ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪ್ರತಿನಿತ್ಯ ಕನಿಷ್ಠ ಒಂದು ತಾಸು ಕೋವಿಡ್ ಲಸಿಕಾ ಪ್ರಗತಿಯ ಕುರಿತಂತೆ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


