ರಾಜ್ಯದಲ್ಲಿ ಕೊರೋನಾ ಏರಿಳಿತ: 315 ಹೊಸ ಪ್ರಕರಣ ಪತ್ತೆ, 236 ಚೇತರಿಕೆ, 2 ಸಾವು
ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕಡಿಮೆಯಾಗಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 315 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,95,600ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕಡಿಮೆಯಾಗಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 315 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,95,600ಕ್ಕೆ ಏರಿಕೆಯಾಗಿದೆ.
236 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 6,831 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದು, ಒಟ್ಟಾರೇ ಮೃತರ ಸಂಖ್ಯೆ 38,198ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.40 ರಷ್ಟಿದ್ದು, ಮರಣ ಪ್ರಮಾಣ ಶೇ. 0.63 ರಷ್ಟಿದೆ. ಬೆಂಗಳೂರಿನಲ್ಲಿ 152 ಹೊಸ ಪ್ರಕರಣ ಪತ್ತೆಯಾಗಿದ್ದು, 142 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.
ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಗದಗ್, ಹಾವೇರಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


