ರಾಜ್ಯ

ರಾಜ್ಯದಲ್ಲಿಂದು ಕೊರೋನಾದಿಂದ ಐವರು ಸಾವು: 257 ಹೊಸ ಪ್ರಕರಣ ಪತ್ತೆ, 205 ಸೋಂಕಿತರು ಗುಣಮುಖ

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 257 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,95,857ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿಂದು ಕೊರೋನಾದಿಂದ ಐವರು ಸಾವು: 257 ಹೊಸ ಪ್ರಕರಣ ಪತ್ತೆ, 205 ಸೋಂಕಿತರು ಗುಣಮುಖ
ಕೋವಿಡ್-19 ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 257 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,95,857ಕ್ಕೆ ಏರಿಕೆಯಾಗಿದೆ.

205 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 6,878 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. 

ಕೊರೋನಾದಿಂದ ಇಂದು ಐವರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 38,203ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.45 ರಷ್ಟಿದ್ದು, ಮರಣ ಪ್ರಮಾಣ ಶೇ.1.94 ರಷ್ಟಿದೆ. ಬೆಂಗಳೂರಿನಲ್ಲಿ 131 ಹೊಸ ಪ್ರಕರಣ ಪತ್ತೆಯಾಗಿದ್ದು, 108 ಸೋಂಕಿತರು ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಬ್ಬರು ಸಾವನ್ನಪ್ಪಿದ್ದಾರೆ. 

 ಬಾಗಲಕೋಟೆ, ಬೆಳಗಾವಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಗದಗ್, ಹಾವೇರಿ, ಕಲಬುರಗಿ, ಕೊಪ್ಪಳ, ಮಂಡ್ಯ, ರಾಯಚೂರು, ರಾಮನಗರ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. 

Related Article

ಕೋವಿಡ್: ಸೋಂಕು ಪೀಡಿತ ದಕ್ಷಿಣ ಆಫ್ರಿಕಾದ ಪ್ರಯಾಣಿಕರ ವರದಿ ಮರುಪರಿಶೀಲಿಸಲು ಅಧಿಕಾರಿಗಳು ಮುಂದು!

ಓಮಿಕ್ರಾನ್ ವೈರಾಣುವಿನ ರೋಗಲಕ್ಷಣಗಳೇನು, ತೀವ್ರತೆ ಎಷ್ಟು?: ಆರೋಗ್ಯ ಸಚಿವ ಡಾ ಸುಧಾಕರ್ ಹೇಳಿದ್ದು ಹೀಗೆ...

ಶಾಲಾ -ಕಾಲೇಜು ಮುಚ್ಚುವ ನಿರ್ಧಾರ ಸದ್ಯಕ್ಕಿಲ್ಲ : ಸಚಿವ ಬಿ.ಸಿ ನಾಗೇಶ್

ಮತ್ತೊಂದು ಶಾಲೆಯಲ್ಲಿ ಕೊರೋನಾ ಸ್ಫೋಟ: ಹಾಸನದ ಚನ್ನರಾಯಪಟ್ಟಣದ ವಸತಿ ಶಾಲೆಯ 13 ಮಕ್ಕಳಲ್ಲಿ ಕೋವಿಡ್ ಪಾಸಿಟಿವ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.