ಮುಂದಿನ 2-3 ದಿನಗಳಲ್ಲಿ ಎಲ್ಲಾ ವೈದ್ಯರಿಗೂ ರಿಸ್ಕ್ ಭತ್ಯೆ ಪಾವತಿ: ಸಚಿವ ಡಾ. ಕೆ.ಸುಧಾಕರ್
ಮುಂದಿನ ಎರಡು-ಮೂರು ದಿನಗಳಲ್ಲಿ ಎಲ್ಲಾ ವೈದ್ಯರಿಗೂ ರಿಸ್ಕ್ ಭತ್ಯೆ ಪಾವತಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು: ಮುಂದಿನ ಎರಡು-ಮೂರು ದಿನಗಳಲ್ಲಿ ಎಲ್ಲಾ ವೈದ್ಯರಿಗೂ ರಿಸ್ಕ್ ಭತ್ಯೆ ಪಾವತಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಕೋವಿಡ್ ರಿಸ್ಕ್ ಭತ್ಯೆ ಪಾವತಿ ವಿಳಂಬದ ಕುರಿತು ವಿಕ್ಟೋರಿಯಾ ಆಸ್ಪತ್ರೆ ಬಳಿ ನಡೆದ ಪ್ರತಿಭಟನೆ ತಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮೆಡಿಕಲ್ ಕಾಲೇಜುಗಳಿಗೆ ರಿಸ್ಕ್ ಭತ್ಯೆಯ ಒಟ್ಟು 73 ಕೋಟಿ ರೂಪಾಯಿ ಮೊತ್ತದ ಮಂಜೂರು ಪ್ರಕ್ರಿಯೆಗಳು ಇಂದು ಪೂರ್ಣಗೊಳ್ಳಲಿವೆ ಎಂದು ಅವರು ತಿಳಿಸಿದ್ದಾರೆ.
ಮುಂದಿನ ಎರಡು ಮೂರು ದಿನಗಳಲ್ಲಿ ರಿಸ್ಕ್ ಭತ್ಯೆಯನ್ನು ಎಲ್ಲಾ ವೈದ್ಯರಿಗೂ ಪಾವತಿಸಲಾಗುವುದು, ಆದ್ದರಿಂದ ಈ ಸಂದರ್ಭದಲ್ಲಿ ಪ್ರತಿಭಟನೆ ಹಿಂಪಡೆದು ಕರ್ತವ್ಯಕ್ಕೆ ಮರಳಬೇಕು ಎಂದು ಟ್ವೀಟ್ ನಲ್ಲಿ ಕೋರಿದ್ದಾರೆ.
ಹೊಸ ಕೋವಿಡ್ ತಳಿ ಜನತೆಯಲ್ಲಿ ತಲ್ಲಣ ಮೂಡಿಸಿರುವಾಗಲೇ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಿರಿಯ ವೈದ್ಯರು ನಡೆಸುತ್ತಿರುವ ಮುಷ್ಕರದಿಂದಾಗಿ ಹೊರ ರೋಗಿಗಳಿಗೆ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ದೊರಕದೆ ಪರದಾಡುವಂತಾಯಿತು. ಸರ್ಕಾರ ಕೊಟ್ಟ ಮಾತಿನಂತೆ ಕೋವಿಡ್ ಪರಿಹಾರ ಭತ್ಯೆಯನ್ನು ನಿಗದಿತ ಅವಧಿಯಲ್ಲಿ ಪಾವತಿ ಮಾಡುತ್ತಿಲ್ಲ ಎಂದು ವೈದ್ಯರು ದೂರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


