ವೇತನ ನೀಡುವಂತೆ ಆಗ್ರಹಿಸಿ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ಪ್ರತಿಭಟನೆ
ಅಕ್ಟೋಬರ್ ತಿಂಗಳ ವೇತನ ಪಾವತಿ ಮಾಡಿಲ್ಲ ಎಂದು ಆರೋಪಿಸಿ ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

ಬೆಂಗಳೂರು: ಅಕ್ಟೋಬರ್ ತಿಂಗಳ ವೇತನ ಪಾವತಿ ಮಾಡಿಲ್ಲ ಎಂದು ಆರೋಪಿಸಿ ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ಕಾರ್ಮಿಕರಿಗೆ ತಕ್ಷಣ ಎರಡು ತಿಂಗಳ ವೇತನ ಪಾವತಿ ಮಾಡಬೇಕು ಮತ್ತು ಪ್ರತಿ ತಿಂಗಳ 7ನೇ ತಾರೀಖಿನೊಳಗೆ ವೇತನವನ್ನು ನೀಡಬೇಕು ಎಂಬ ಹಕ್ಕೋತ್ತಾಯದೊಂದಿಗೆ ಬಿಎಂಸಿಆರ್‌ಐ (ವಿಕ್ಟೋರಿಯಾ ಆಸ್ಪತ್ರೆ) ಆಡಳಿತ ಮಂಡಳಿಯ ವಿರುದ್ಧ ಎಐಸಿಸಿಟಿಯು ಸಂಘಟನೆಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕಾರ್ಮಿಕ ಕಾನೂನುಗಳ ಅನ್ವಯ ಪ್ರತಿ ತಿಂಗಳು 7ನೇ ತಾರೀಖಿನೊಳಗೆ ವೇತವನ್ನು ಕಡ್ಡಾಯವಾಗಿ ಪಾವತಿಸಬೇಕಾಗಿರುತ್ತದೆ. ಆದರೆ ವಿಕ್ಟೋರಿಯಾ ಆಸ್ಪತ್ರೆಯ ಆಡಳಿತ ಮಂಡಳಿಯಾದ ಬಿಎಂಸಿಆರ್‌ಐ ಈ ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ವೇತನ ನೀಡದೆ ಕಾನೂನುಗಳನ್ನು ಗಾಳಿಗೆ ತೂರಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ವಿಕ್ಟೋರಿಯಾ ಆಸ್ಪತ್ರೆಯ ಆಡಳಿತ ಮಂಡಳಿಯಾದ ಬಿಎಂಸಿಆರ್‌ಐ ಈ ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ವೇತನ ನೀಡದೆ ಇರುವ ಕಾರಣ, ಮನೆ ಬಾಡಿಗೆ, ಊಟ-ಬಟ್ಟೆ, ಅನಾರೋಗ್ಯಕ್ಕೆ ಚಿಕಿತ್ಸೆ ಮತ್ತು ಮಕ್ಕಳ ಸ್ಕೂಲ್ ಫೀ ಸೇರಿದಂತೆ ಇತರೆ ಮೂಲಭೂತ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಈ ಕಾರ್ಮಿಕರು ಬಡ್ಡಿ ಸಾಲದ ಸುಳಿಯಲ್ಲಿ ಸಿಲುಕಬೇಕಾಗಿದೆ. ದಿನನಿತ್ಯದ ಅವಶ್ಯಕ ವಸ್ತುಗಳ ಬೆಲೆ ಗಗನಕ್ಕೇರುತ್ತೀರುವ ಈ ಸಂಧರ್ಭದಲ್ಲಿ ಬಿಎಂಸಿಆರ್‌ಐ ಆಡಳಿತ ಮಂಡಳಿಯು ಕಾರ್ಮಿಕರಿಗೆ ವೇತನ ನೀಡದೆ ದುಡಿಸಿಕೊಳ್ಳುತ್ತಿರುವುದರಿಂದ ಕಾರ್ಮಿಕರು ಬೀದಿಪಾಲಾಗುವ ಸಂಭವವಿದೆ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಐಸಿಸಿಟಿಯು ಆಕ್ರೋಶ ವ್ಯಕ್ತಪಡಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


