ರಾಜ್ಯದಲ್ಲಿ ಮತಾಂತರ ನಿಷೇಧಕ್ಕೆ ಕಾನೂನು: ಗೃಹ ಸಚಿವ ಆರಗ ಜ್ಞಾನೇಂದ್ರ
ಮತಾಂತರದಿಂದ ರಾಜ್ಯದಲ್ಲಿ ಕೋಮು ಗಲಭೆ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶುಕ್ರವಾರ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಹಾಸನ: ಮತಾಂತರದಿಂದ ರಾಜ್ಯದಲ್ಲಿ ಕೋಮು ಗಲಭೆ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶುಕ್ರವಾರ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಹಾಸನದ ಹಳೆಬೀಡಿನಲ್ಲಿ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಮಾತನಾಡಿದ ಗೃಹ ಸಚಿವರು, ಮತಾಂತರಕ್ಕೆ ಶಾಸಕ ಗೂಳಿಹಟ್ಟಿ ಶೇಖರ್ ಅವರ ಕುಟುಂಬವೇ ಒಳಗಾಗಿರುವುದು ನಿಜಕ್ಕೂ ವಿಪರ್ಯಾಸ ಮತಾಂತರ ನಿಷೇಧಕ್ಕೆ ಸೂಕ್ತ ಕಾಯಿದೆ ತರುವುದಾಗಿ ಹೇಳಿದರು.
ಮತಾಂತರ ಮಾಡಿ ತಮ್ಮ ಸಂಖ್ಯೆ ಹೆಚ್ಚಿಸಿಕೊಳ್ಳುವುದು ಅಧರ್ಮ, ಹಿಂದೂ ಧರ್ಮ ಜಗತ್ತಿನಲಿಯೇ ಪಾವಿತ್ರ್ಯತೆ ಹೊಂದಿರುವಂತದ್ದು, ಮತಾಂತರದಿಂದ ರಾಜ್ಯಾದ್ಯಂತ ಕೋಮು ಗಲಭೆ ನಡೆಯುತ್ತಿದೆ ಎಂದು ಗೃಹ ಸಚಿವರು ಹೇಳಿದ್ದಾರೆ.
ಆರ್ ಎಸ್ ಎಸ್ ಅನ್ನು ಭಯೋತ್ಪಾದಕರಿಗೆ ಹೋಲಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಸಿದ್ದರಾಮಯ್ಯನವರಿಗೆ ತಾಲಿಬಾನ್ ಮತ್ತು ಆರ್ ಎಸ್ಎಸ್ ನಡುವಣ ವ್ಯತ್ಯಾಸ ಗೊತ್ತಾಗಿಲ್ಲ. ರಾಜಕೀಯ ಕಾರಣಕ್ಕಾಗಿ ಆರ್ಎಸ್ಎಸ್ ಅನ್ನು ವಿನಾಕಾರಣ ಎಳೆಯುತ್ತಿದ್ದಾರೆ. ಅವರಿಗೆ ಬೇರೆ ಅಸ್ತ್ರವಿಲ್ಲದೆ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಮೂದಲಿಸಿದರು.
ದೇಶ ಮತ್ತು ವ್ಯಕ್ತಿ ಎಂದು ಬಂದಾಗ ಮೊದಲು ದೇಶದ ಪರ ನಿಲ್ಲಬೇಕು ಎಂದು ಆರ್ಎಸ್ಎಸ್ ಹೇಳುತ್ತದೆ. ಈ ರೀತಿ ಹೇಳುವ ಸಂಸ್ಥೆ ಯಾವುದಾದರೂ ಇದ್ದರೆ ಅದು ಆರ್ಎಸ್ಎಸ್ ಮಾತ್ರ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


