ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವಂತೆ ಜರ್ಮನಿಗೆ ಸಚಿವ ಮುರುಗೇಶ್ ನಿರಾಣಿ ಆಹ್ವಾನ!
2022ರ ನವೆಂಬರ್ ತಿಂಗಳ 2ರಿಂದ 4ವರೆಗೆ ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ನಡೆಸಲಾಗುತ್ತಿದ್ದು, ಕರ್ನಾಟಕದೊಂದಿಗೆ ಕೈಜೋಡಿಸುವಂತೆ ಜರ್ಮನಿಗೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರು ಬುಧವಾರ ಆಹ್ವಾನ ನೀಡಿದ್ದಾರೆ.

ಬೆಂಗಳೂರು: 2022ರ ನವೆಂಬರ್ ತಿಂಗಳ 2ರಿಂದ 4ವರೆಗೆ ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ನಡೆಸಲಾಗುತ್ತಿದ್ದು, ಕರ್ನಾಟಕದೊಂದಿಗೆ ಕೈಜೋಡಿಸುವಂತೆ ಜರ್ಮನಿಗೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರು ಬುಧವಾರ ಆಹ್ವಾನ ನೀಡಿದ್ದಾರೆ.
ಹೂಡಿಕೆ ಅವಕಾಶಗಳನ್ನು ಅನ್ವೇಷಿಸಲು ಜಿಐಎಂ ಉತ್ತಮ ವೇದಿಕೆಯಾಗಿದೆ ಎಂದು ಸಚಿವ ನಿರಾಣಿಯವರು ಜರ್ಮನಿಯ ಕಾನ್ಸುಲ್ ಜನರಲ್ ಅಚಿಮ್ ಬುರ್ಕಾರ್ಟ್ ನೇತೃತ್ವದ ನಿಯೋಗಕ್ಕೆ ತಿಳಿಸಿದ್ದಾರೆ.
ಕರ್ನಾಟಕ ಮತ್ತು ಜರ್ಮನಿ ಬಲವಾದ ಸಂಬಂಧವನ್ನು ಹೊಂದಿದ್ದು, ವಿಶೇಷವಾಗಿ ವ್ಯಾಪಾರ, ಎಫ್‌ಡಿಐ ಮತ್ತು ಹೂಡಿಕೆಗೆ ರಾಜ್ಯವು ಸೂಕ್ತ ತಾಣವಾಗಿದೆ. ಜರ್ಮನಿಯ ಸುಮಾರು 200 ಕಂಪನಿಗಳಿಗೆ ಕರ್ನಾಟಕ ತವರಾಗಿದೆ ಎಂದು ಹೇಳಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


