1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅ.7 ರಿಂದ ಅರ್ಜಿ ಸಲ್ಲಿಕೆ ಆರಂಭ
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1,ಸಾವಿರದ 242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಇದೇ 7ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1,ಸಾವಿರದ 242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಇದೇ 7ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಲಿಖಿತ ಪರೀಕ್ಷೆ ನಡೆಸಿ ಸಂಪೂರ್ಣ ಪಾರದರ್ಶಕತೆಯೊಂದಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಪಡೆದ ಅಂಕಗಳೇ ನೇಮಕಾತಿಗೆ ಆಧಾರವಾಗಲಿದ್ದು, ಸಂದರ್ಶನ ಇರುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಸ್ಪಷ್ಟಪಡಿಸಿದ್ದಾರೆ.
ಡಿಸೆಂಬರ್ ನಲ್ಲಿ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ತೇರ್ಗಡೆ ಕಡ್ಡಾಯವಾಗಿದೆ. ಈ ವಿಷಯಗಳಲ್ಲಿ ಮಾತ್ರ ವಿವರಣಾತ್ಮಕ ಉತ್ತರಗಳನ್ನು ಬರೆಯಬೇಕಾಗುತ್ತದೆ. ಉಳಿದ ವಿಷಯಗಳಲ್ಲಿ ಬಹು ಆಯ್ಕೆ ಪ್ರಶ್ನೆಗಳಿರಲಿವೆಸಚಿವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


