ರಾಜ್ಯ

ರಾಮನಗರ: 45 ಕಾರ್ಮಿಕರನ್ನು ವಜಾಗೊಳಿಸಿದ ಟೊಯೊಟಾ ಕಂಪನಿ

ಬಿಡದಿ‌ ಕೈಗಾರಿಕಾ ಪ್ರದೇಶದಲ್ಲಿರುವ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು ತನ್ನ 45 ಉದ್ಯೋಗಿಗಳನ್ನು ಸೇವೆಯಿಂದ ವಜಾ ಮಾಡಿದೆ.

ರಾಮನಗರ: 45 ಕಾರ್ಮಿಕರನ್ನು ವಜಾಗೊಳಿಸಿದ ಟೊಯೊಟಾ ಕಂಪನಿ
ಸಂಗ್ರಹ ಚಿತ್ರ
Published On :

ರಾಮನಗರ: ಬಿಡದಿ‌ ಕೈಗಾರಿಕಾ ಪ್ರದೇಶದಲ್ಲಿರುವ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು ತನ್ನ 45 ಉದ್ಯೋಗಿಗಳನ್ನು ಸೇವೆಯಿಂದ ವಜಾ ಮಾಡಿದೆ.

ಕಾರ್ಮಿಕರ ಮೇಲೆ ಅಧಿಕಾರಿಗಳು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಟಿಕೆಎಂ ನೌಕರರ ಸಂಘದ ನೇತೃತ್ವದಲ್ಲಿ ಕೆಲವು‌ ತಿಂಗಳ ಹಿಂದೆ ‌ಸಾವಿರಾರು‌ ಕಾರ್ಮಿಕರು ಮುಷ್ಕರ ನಡೆಸಿದ್ದರು. ಇದರಿಂದಾಗಿ ಎರಡೆರಡು ಬಾರಿ ಕಂಪನಿ‌ ಲಾಕೌಟ್ ಘೋಷಿಸಿತ್ತು. ಕಡೆಗೆ ಸರ್ಕಾರದ ಮಧ್ಯಸ್ಥಿಕೆಯಲ್ಲಿ ಸಂಧಾನ ಸಭೆ ನಡೆದು‌ ಉತ್ಪಾದನೆ ಪುನರಾರಂಭಗೊಂಡಿತ್ತು.

ನಿಯಮಬಾಹಿರವಾಗಿ ಮುಷ್ಕರ ನಡೆಸಿದ ಆರೋಪದ‌ ಮೇಲೆ ಟಿಕೆಎಂ ತನ್ನ 66 ನೌಕರರನ್ನು ಸೇವೆಯಿಂದ ಅಮಾನತು ಮಾಡಿ, ಅವರ ವಿರುದ್ಧ ತನಿಖೆಗೆ ಆದೇಶಿಸಿತ್ತು. ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ‌ಕಂಪನಿ‌ ‌ನಿಯಮಗಳ ಪ್ರಕಾರ ಈ ಕಾರ್ಮಿಕರನ್ನು ಸೇವೆಯಿಂದ ವಜಾ‌ ಮಾಡಿರುವುದಾಗಿ ಟಿಕೆಎಂ‌ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.