ರಾಜ್ಯ

ಕೋವಿಡ್-19: ಸಾವಿನ ಸಂಖ್ಯೆಯಲ್ಲಿ ಏರಿಳಿತ; ರಾಜ್ಯದಲ್ಲಿಂದು 8 ಸಾವು, 664 ಹೊಸ ಪ್ರಕರಣ ಪತ್ತೆ, 711 ಗುಣಮುಖ

ರಾಜ್ಯದಲ್ಲಿ ಕೋವಿಡ್-19 ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ ಏರಿಳಿತವಾಗುತ್ತಿದ್ದು, ಅ.03 ರಂದು ಪ್ರಕಟಗೊಂಡ ವರದಿಯಲ್ಲಿ 24 ಗಂಟೆಗಳಲ್ಲಿ 8 ಮಂದಿ ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ.

ಕೋವಿಡ್-19: ಸಾವಿನ ಸಂಖ್ಯೆಯಲ್ಲಿ ಏರಿಳಿತ; ರಾಜ್ಯದಲ್ಲಿಂದು 8 ಸಾವು, 664 ಹೊಸ ಪ್ರಕರಣ ಪತ್ತೆ, 711 ಗುಣಮುಖ
ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ
Published On :

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ ಏರಿಳಿತವಾಗುತ್ತಿದ್ದು, ಅ.03 ರಂದು ಪ್ರಕಟಗೊಂಡ ವರದಿಯಲ್ಲಿ 24 ಗಂಟೆಗಳಲ್ಲಿ 8 ಮಂದಿ ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ. 

ಕಳೆದ 24 ಗಂಟೆಗಳಲ್ಲಿ 711 ಮಂದಿ ಕೋವಿಡ್-19 ನಿಂದ ಚೇತರಿಕೆ ಕಂಡಿದ್ದು ಒಟ್ಟಾರೆ ಗುಣಮುಖರಾದವರ ಸಂಖ್ಯೆ 29,27,740 ಆಗಿದೆ. ಇಂದು 664 ಮಂದಿಗೆ ಹೊಸದಾಗಿ ಕೋವಿಡ್-19 ಸೋಂಕು ತಗುಲಿದ್ದು ರಾಜ್ಯದಲ್ಲಿ ಒಟ್ಟಾರೆ ಪಾಸಿಟೀವ್ ಪ್ರಕರಣಗಳ ಸಂಖ್ಯೆ 29,77,889 ಆಗಿದ್ದು,  ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 12301 ಕ್ಕೆ ತಲುಪಿದೆ. 

ಅ.02 ರಂದು ಪ್ರಕಟಗೊಂಡಿದ್ದ ವರದಿಯಲ್ಲಿ 4 ಮಂದಿ ಸಾವನ್ನಪ್ಪಿದ್ದರೆ ಇಂದು ಸಾವಿನ ಸಂಖ್ಯೆ ಏರಿಕೆಯಾಗಿದ್ದು 8 ಮಂದಿ ಮೃತಪಟ್ಟಿದ್ದು ಕೋವಿಡ್-19 ನಿಂದ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 37819ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟಾರೆ ಸೋಂಕಿನ ಪ್ರಮಾಣ ಶೇ.0.52 ರಷ್ಟಿದ್ದು, ಮರಣ ಪ್ರಮಾಣ ಶೇ.1.20 ರಷ್ಟಿದೆ.

ಬೆಂಗಳೂರು ನಗರದಲ್ಲಿ 196 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, 258 ಮಂದಿ ಡಿಸ್ಚಾರ್ಜ್ ಆಗಿದ್ದು ಮೂವರು ಸಾವನ್ನಪ್ಪಿದ್ದಾರೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ರಾಯಚೂರು ಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.