ರಾಜ್ಯದಲ್ಲಿ ಆತ್ಮಹತ್ಯೆ ಪ್ರಮಾಣ ಹೆಚ್ಚಳ: ಕೊರೊನಾ ಹಿನ್ನೆಲೆಯ ಬಡತನ ಮತ್ತು ನಿರುದ್ಯೋಗ ಕಾರಣ
ರಾಜ್ಯ ಸರ್ಕಾರ ಕೊರೊನಾ ಲಸಿಕೆ ನೀಡುವ ಮೂಲಕ ಕೊರೊನಾ ಸಾಂಕ್ರಾಮಿಕದಿಂದ ಜನರನ್ನು ರಕ್ಷಿಸುತ್ತಿದೆ ನಿಜ, ಆದರೆ ಕೊರೊನಾದಿಂದ ಉಂಟಾಗಿರುವ ನಿರುದ್ಯೋಗ, ಆರ್ಥಿಕ ಸಂಕಷ್ಟ, ನಷ್ಟ ದಂಥ ಸಮಸ್ಯೆಗಳಿಗೆ ಪರಿಹಾರ ನೀಡುವವರಾರು ಎನ್ನುವುದು ಬಗೆಹರಿಯದ ಸಮಸ್ಯೆ

ಬೆಂಗಳೂರು: ಕೊರೊನಾದಿಂದ ಆರ್ಥಿಕ ಸಂಕಷ್ಟ ಉಂಟಾಗಿ ಜನರ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡುತ್ತಿದೆ. ಆರ್ಥಿಕ ಸಂಕಷ್ಟ, ನಿರುದ್ಯೋಗ ಮುಂತಾದ ಕಾರಣಗಳಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಿದೆ.
ರಾಜ್ಯದಲ್ಲಿ ಸಂಭ್ವಿಸಿರುವ ಆತ್ಮಹತ್ಯೆ ಪ್ರಕರಣಗಳನ್ನು ಅಧ್ಯಯನಕ್ಕೊಳಪಡಿಸಿದಾಗ ಆರ್ಥಿಕ ಮುಗ್ಗಟ್ಟು, ನಿರುದ್ಯೋಗ, ವ್ಯಾಪಾರದಲ್ಲಿ ನಷ್ಟ ಮುಂತಾದ ಕಾರಣಗಳು ದೊರೆಯುತ್ತವೆ. ಇವೆಲ್ಲಾ ಕಾರಣಗಳಿಗೂ ಕೊರೊನಾ ಸಾಂಕ್ರಾಮಿಕ ನೇರ ನಂಟನ್ನು ಹೊಂದಿರುವುದನ್ನು ಪರಿಣತರು ಗುರುತಿಸಿದ್ದಾರೆ.
ರಾಜ್ಯ ಸರ್ಕಾರ ಕೊರೊನಾ ಲಸಿಕೆ ನೀಡುವ ಮೂಲಕ ಕೊರೊನಾ ಸಾಂಕ್ರಾಮಿಕದಿಂದ ಜನರನ್ನು ರಕ್ಷಿಸುತ್ತಿದೆ ನಿಜ, ಆದರೆ ಕೊರೊನಾದಿಂದ ಉಂಟಾಗಿರುವ ನಿರುದ್ಯೋಗ, ಆರ್ಥಿಕ ಸಂಕಷ್ಟ, ನಷ್ಟ ದಂಥ ಸಮಸ್ಯೆಗಳಿಗೆ ಪರಿಹಾರ ನೀಡುವವರಾರು ಎನ್ನುವುದು ಬಗೆಹರಿಯದ ಸಮಸ್ಯೆಯಾಗಿದೆ.
ಮಾರ್ಚ್ 2020ರಿಂದ ಇದುವರೆಗೂ 850 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ 10 ಪ್ರಕರಣಗಳು ವರದಕ್ಷಿಣೆಯದ್ದು. 373 ಪ್ರಕರಣಗಳು ಇತರರ ಕುಮ್ಮಕ್ಕಿನಿಂದ ಉಂಟಾದವು. ಇನ್ನುಳಿದ 344 ಪ್ರಕರಣಗಳು ನಿರುದ್ಯೋಗ, ಆರ್ಥಿಕ ಸಂಕಷ್ಟದಿಂದ ಸಂಭವಿಸಿದ ಆತ್ಮಹತ್ಯೆಗಳಾಗಿವೆ.
ಜೀವನದ ಗುಣಮಟ್ಟ ಕುಗ್ಗಿದಾಗ ಅದರೊಂದಿಗೆ ಹೊಂದಿಕೊಳ್ಳುವುದು ಕಷ್ತವಾಗಿ ಆತ್ಮಹತ್ಯೆಯ ದಾರಿ ಹಿಡಿಯುತ್ತಾರೆ ಎಂದು ಮನೋವೈದ್ಯರು ಹೇಳಿದ್ದಾರೆ. ಈ ಕಾಲದಲ್ಲಿ ಜನರು ಇತರರ ಮೇಲೆ ತುಂಬಾ ಅವಲಂಬಿತರಾಗುತ್ತಿದ್ದಾರೆ. ಸಾಲ ಮಾಡಲು ಹಿಂದೆ ಮುಂದೆ ನೋಡುತ್ತಿಲ್ಲ. ನ್ಯೂಕ್ಲಿಯರ್ ಫ್ಯಾಮಿಲಿಗಳಾಗುತ್ತಿವೆ. ಇವೆಲ್ಲದರಿಂದಾಗಿ ಸಮಸ್ಯೆಗಳು ಎದುರಾದಾಗ ಅವರು ಏಕಾಂಗಿಗಳಾಗಿಬಿಡುತ್ತಾರೆ. ಅತ್ಮಹತ್ಯೆಗೆ ಇದು ಪ್ರಮುಖ ಕಾರಣ ಎನ್ನುತ್ತಾರೆ ವೈದ್ಯರು.
Related Article
ಕೋವಿಡ್-19 ಚೇತರಿಕೆಯ ನಂತರ ಹೃದಯಾಘಾತದ ಅಪಾಯದ ಬಗ್ಗೆ ಇರಲಿ ಎಚ್ಚರ!
ಮಕ್ಕಳಲ್ಲಿ ಹೆಚ್ಚುತ್ತಿರುವ ಕ್ಯಾನ್ಸರ್ ಪ್ರಕರಣಗಳು: ಹೆಣ್ಣುಮಕ್ಕಳಿಗಿಂತ ಗಂಡು ಮಕ್ಕಳಲ್ಲೇ ಹೆಚ್ಚು
'ಬಿಪಿ' ನಿರ್ಲಕ್ಷ್ಯದಿಂದ ದೇಹದಲ್ಲಿ ರೋಗದ ಹೊರೆ ಹೆಚ್ಚಾಗಲಿದೆ: ಹೈಪರ್'ಟೆನ್ಶನ್ ಕುರಿತು ಅಧ್ಯಯನ
ಕ್ಯಾನ್ಸರ್ ರೋಗಿಗಳ ನೆಚ್ಚಿನ ಔಷಧ ಪದ್ಧತಿ ಆಯುರ್ವೇದ: ಸಮೀಕ್ಷೆಯಿಂದ ಬಹಿರಂಗ
ಕಳೆದ 30 ವರ್ಷಗಳಲ್ಲಿ ಹೈಪರ್ ಟೆನ್ಷನ್ ಪ್ರಮಾಣ ದುಪ್ಪಟ್ಟು
ಕೊರೊನಾ ವಾಸಿಯಾದವರಲ್ಲಿ ಕೂದಲು ಉದುರುವಿಕೆ ಅಡ್ಡ ಪರಿಣಾಮ ಪತ್ತೆ
ಪಿತ್ತಕೋಶದಲ್ಲಿ ಕಲ್ಲು: ಇತ್ತೀಚಿಗೆ ತೀವ್ರವಾಗಿ ಕಾಡುತ್ತಿರುವ ಈ ಸಮಸ್ಯೆ ಬಗ್ಗೆ ಹುಷಾರಾಗಿರಿ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


