ಮೈಸೂರು: ಚಾಮುಂಡಿ ಬೆಟ್ಟಕ್ಕೆ ಅಕ್ಟೋಬರ್ 7 ಮಧ್ಯಾಹ್ನದವರೆಗೆ ಸಾರ್ವಜನಿಕರಿಗೆ ನಿಷೇಧ
ಮಹಾಲಯ ಅಮಾವಾಸ್ಯೆ ಮತ್ತು ದಸರಾ ಉದ್ಘಾಟನೆ ಕಾರ್ಯಕ್ರಮ ಅಂಗವಾಗಿ ಮಂಗಳವಾರ ಅಂದರೆ ಅಕ್ಟೋಬರ್ 5ರ ಮುಂಜಾನೆಯಿಂದ ನಾಡಿದ್ದು 7, ಗುರುವಾರದ ಮಧ್ಯಾಹ್ನದವರೆಗೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

ಮೈಸೂರು: ಮಹಾಲಯ ಅಮಾವಾಸ್ಯೆ ಮತ್ತು ದಸರಾ ಉದ್ಘಾಟನೆ ಕಾರ್ಯಕ್ರಮ ಅಂಗವಾಗಿ ಮಂಗಳವಾರ ಅಂದರೆ ಅಕ್ಟೋಬರ್ 5ರ ಮುಂಜಾನೆಯಿಂದ ನಾಡಿದ್ದು 7ನೇ ತಾರೀಖು ಗುರುವಾರದ ಮಧ್ಯಾಹ್ನದವರೆಗೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.
ಸಾರ್ವಜನಿಕರ ವಾಹನಗಳಿಗೂ ನಿಷೇಧ ಹೇರಲಾಗಿದ್ದು, ದಸರಾ ಉದ್ಘಾಟನೆ ಸಮಾರಂಭಕ್ಕೆ ಆಗಮಿಸುವವರಿಗೆ ಈ ನಿಷೇಧ ಅನ್ವಯವಾಗುವುದಿಲ್ಲ ಎಂದು ಮೈಸೂರು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.
ಮೈಸೂರು ಅರಮನೆಯಲ್ಲಿ ಸರಳ ಆಚರಣೆ: ಕೋವಿಡ್-19 ಹಿನ್ನೆಲೆಯಲ್ಲಿ ಮೈಸೂರು ಅರಮನೆಯಲ್ಲಿ ಈ ಬಾರಿಯೂ ಶರನ್ನವರಾತ್ರಿ ಸಂದರ್ಭದಲ್ಲಿ ಪೂಜಾ ವಿಧಿಗಳನ್ನು ಕೇವಲ ಸಾಂಪ್ರದಾಯಿಕವಾಗಿ ನಡೆಸಲಾಗುತ್ತದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಚರಣೆಯಲ್ಲಿ ಸಾರ್ವಜನಿಕರು ಹಾಗೂ ಮಾಧ್ಯಮಗಳ ಭಾಗವಹಿಸುವಿಕೆ ಇರುವುದಿಲ್ಲ, ಕೋವಿಡ್ ಹರಡುವಿಕೆ ತಡೆ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯವಾಗಿದೆ ಎಂದು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


