ಆಸ್ತಿ ತೆರಿಗೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ
ಕರ್ನಾಟಕ ಪುರಸಭೆಗಳ ಕಾಯ್ದೆ ಮತ್ತು ಕರ್ನಾಟಕ ನಗರ ಪಾಲಿಕೆ ಕಾಯ್ದೆಗಳಿಗೆ ತಿದ್ದುಪಡಿ ಮಾಡಿರುವ ಆಸ್ತಿ ತೆರಿಗೆ ಹೆಚ್ಚಿಸುವ ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು: ಕರ್ನಾಟಕ ಪುರಸಭೆಗಳ ಕಾಯ್ದೆ ಮತ್ತು ಕರ್ನಾಟಕ ನಗರ ಪಾಲಿಕೆ ಕಾಯ್ದೆಗಳಿಗೆ ತಿದ್ದುಪಡಿ ಮಾಡಿರುವ ಆಸ್ತಿ ತೆರಿಗೆ ಹೆಚ್ಚಿಸುವ ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.
ರಾಜ್ಯದಲ್ಲಿ ಜನಸ್ನೇಹಿ ತೆರಿಗೆ ವ್ಯವಸ್ಥೆ ಜಾರಿ ಮಾಡುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ನಾಗರಾಜ್ ಹೊಂಗಲ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ನೇತೃತ್ವದ ಪೀಠವು ವಿಚಾರಣೆ ನಡೆಸಿತು.
ತಿದ್ದುಪಡಿ ಮಾಡಲಾಗಿರುವ ಕರ್ನಾಟಕ ಪುರಸಭೆಗಳ ಕಾಯಿದೆಯ ಸೆಕ್ಷನ್‍ಗಳಾದ 101 ಮತ್ತು 102ಎ ಮತ್ತು ಕರ್ನಾಟಕ ನಗರ ಪಾಲಿಕೆ ಕಾಯಿದೆ ಸೆಕ್ಷನ್ 108 ಹಾಗೂ ಫೆಬ್ರವರಿ 19ರಂದು ಹೊರಡಿಸಲಾಗಿರುವ ಸುತ್ತೋಲೆಯನ್ನು ರದ್ದುಪಡಿಸುವಂತೆ ಮನವಿಯಲ್ಲಿ ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


