ರಾಜ್ಯ

ಬೆಂಗಳೂರು ಸೇರಿ ರಾಜ್ಯಾದ್ಯಂತ ಅ.10 ರವರೆಗೂ ಮಳೆ ಮುಂದುವರಿಕೆ ಸಾಧ್ಯತೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನಿನ್ನೆ ರಾತ್ರಿಯಿಂದ ಸುರಿದ ಮಳೆ ಇಂದು ಮುಂಜಾನೆವರೆಗೂ ಮುಂದುವರೆಯಿತು.

ಬೆಂಗಳೂರು ಸೇರಿ ರಾಜ್ಯಾದ್ಯಂತ ಅ.10 ರವರೆಗೂ ಮಳೆ ಮುಂದುವರಿಕೆ ಸಾಧ್ಯತೆ
ಬೆಂಗಳೂರಿನಲ್ಲಿ ಮಳೆ
Published On :

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನಿನ್ನೆ ರಾತ್ರಿಯಿಂದ ಸುರಿದ ಮಳೆ ಇಂದು ಮುಂಜಾನೆವರೆಗೂ ಮುಂದುವರೆಯಿತು.

ನಿನ್ನೆ ರಾತ್ರಿಯಿಂದ ಬೆಂಗಳೂರಿನ ಬಹುತೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ತಡರಾತ್ರಿ ಆರಂಭವಾದ ಮಳೆ ಆರ್ಭಟ ಇಂದು ಮುಂಜಾನೆವರೆಗೂ ಮುಂದುವರೆಯಿತು. ನಗರದ ಬಸವನಗುಡಿ, ಮಲ್ಲೇಶ್ವರಂ, ರಾಜಾಜಿನಗರ, ಆರ್​ಆರ್​ ನಗರ, ಹೆಬ್ಬಾಳ, ಯಲಹಂಕ, ಎಲೆಕ್ಟ್ರಾನಿಕ್ ಸಿಟಿ, ಕೋರಮಂಗಲ, ಬನಶಂಕರಿ, ಪದ್ಮನಾಭನಗರ, ಹನುಮಂತನಗರ, ಗಿರಿನಗರ, ಚಾಮರಾಜಪೇಟೆ ಸೇರಿದಂತೆ ಹಲವೆಡೆ ಮಳೆ ಸುರಿದಿದೆ. 

ಇದರಿಂದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ನದಿಯಂತಾದ ರಸ್ತೆಗಳಲ್ಲಿ ಸಂಚರಿಸಲಾಗದೆ ವಾಹನ ಸವಾರರು ಪರದಾಡಿದರು. ಅಲ್ಲದೆ ಮುಂಜಾನೆವರೆಗೂ ಸುರಿದ ಮಳೆರಾಯ ಇಂದು ಬೆಳಗ್ಗೆ ಕೊಂಚ ಬ್ರೇಕ್ ಕೊಟ್ಟಿದ್ದನಾದರೂ ಕೊಂಚ ಬಿಡುವಿನ ನಂತರ ಮತ್ತೆ ತನ್ನ ಆರ್ಭಟ ಮುಂದುವರೆಸಿದ್ದಾನೆ. ಪರಿಣಾಮ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ. ಮಳೆಯಿಂದ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮರಗಳು ಬಿದ್ದಿದ್ದು, ಇನ್ನು ಕೆಲವೆಡೆ ಮನೆ, ಅಪಾರ್ಟ್​ಮೆಂಟ್​ಗಳಿಗೆ ನೀರು ನುಗ್ಗಿದೆ. 

ಅಕ್ಟೋಬರ್ 10ರವರೆಗೂ ಮಳೆ ಆರ್ಭಟ: ಹವಾಮಾನ ಇಲಾಖೆ
ಇನ್ನು ಇದೇ ಅಕ್ಚೋಬರ್ 10ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನ ಸುತ್ತಮುತ್ತ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಷಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಷಿಯಸ್ ಉಷ್ಣಾಂಶ ದಾಖಲಾಗಲಿದೆ. ಇಂದು ಸಂಜೆಯವರೆಗೂ ಮಳೆ ಮುಂದುವರೆಯುವ ಸಾಧ್ಯತೆಯಿದೆ.

ದಕ್ಷಿಣ ಭಾರತದ ಕಡೆ ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ 4 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಪ್ರಾಕೃತಿಕ ಮತ್ತು ನೈಸರ್ಗಿಕ ವಿಕೋಪ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.  ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಹೆಚ್ಚಿದೆ. ಸ್ವಲ್ಪ ಸಮಯ ಮಳೆ ಕಡಿಮೆಯಾಗಿ, ಸ್ವಲ್ಪ ಸಮಯ ಮಳೆ ಜಾಸ್ತಿ ಆಗಬಹುದು ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.