ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ; 523 ಹೊಸ ಪ್ರಕರಣ ಪತ್ತೆ, 621 ಚೇತರಿಕೆ, 9 ಸಾವಿನ ವರದಿ

ರಾಜ್ಯದಲ್ಲಿ ಕೊರೋನಾ ಇಳಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 523 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29, 79, 331 ಆಗಿದೆ.

ಕೋವಿಡ್-19: ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ; 523 ಹೊಸ ಪ್ರಕರಣ ಪತ್ತೆ, 621 ಚೇತರಿಕೆ, 9 ಸಾವಿನ ವರದಿ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಳಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 523 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29, 79, 331 ಆಗಿದೆ.

621 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29,29,629ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 11, 819 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ ಇಂದು 9 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 37,854ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ 0.39 ರಷ್ಟಿದ್ದು, ಮರಣ ಪ್ರಮಾಣ ಶೇ. 1. 72 ರಷ್ಟಿದೆ.  ಬೆಂಗಳೂರಿನಲ್ಲಿ 205 ಹೊಸ ಪ್ರಕರಣ ಪತ್ತೆಯಾಗಿದ್ದು, 230 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಬ್ಬರು ಸಾವನ್ನಪ್ಪಿದ್ದಾರೆ.

ಚಿಕ್ಕಬಳ್ಳಾಪುರ, ಹಾವೇರಿ, ಕಲಬುರಗಿ, ವಿಜಯಪುರ ಹಾಗೂ ಯಾದಗರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. ಬೆಂಗಳೂರು ಹೊರತುಪಡಿಸಿದರೆ ಬಹುತೇಕ ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಎರಡಂಕಿ ದಾಟಿಲ್ಲ.

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.