ಗದಗ: ತನ್ನಿಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ತಾಯಿಯೊಬ್ಬರು ಮುದ್ದಾದ ಎರಡು ಮಕ್ಕಳಿಗೆ ವಿಷ ಉಣಿಸಿ, ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಸೋಮವಾರ...

ಗದಗ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ತಾಯಿಯೊಬ್ಬರು ಮುದ್ದಾದ ಎರಡು ಮಕ್ಕಳಿಗೆ ವಿಷ ಉಣಿಸಿ, ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಯಲ್ಲವ್ವ ಚಂದಣ್ಣವರ(27), ಸ್ವಪ್ನಾ(2) ಮೃತಪಟ್ಟಿದ್ದು, ಸಮರ್ಥ್(6)ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಯಲ್ಲವ್ವ ಚಂದಣ್ಣವರ, ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಈ ಕಾಯಿಲೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ತಾನು ವಿಷ ಸೇವಿಸಿ ಮಕ್ಕಳಾದ ಸಮರ್ಥ್ ಮತ್ತು ಸ್ವಪ್ನಾಳಿಗೂ ವಿಷ ಕುಡಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಸ್ಥಳೀಯರು ದೌಡಾಯಿಸಿ ತಾಯಿ ಮತ್ತು ಮಕ್ಕಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಸೋಮವಾರ ತಡರಾತ್ರಿ ಚಿಕಿತ್ಸೆ ಫಲಿಸದೇ ಯಲ್ಲವ್ವ ಮೃತಪಟ್ಟಿದ್ದು, ಮಂಗಳವಾರ ಚಿಕಿತ್ಸೆ ಫಲಿಸದೇ 2 ವರ್ಷದ ಸ್ವಪ್ನಾ ಕೂಡ ಕೊನೆಯುಸಿರೆಳೆದಿದ್ದಾಳೆ. ಸದ್ಯ ಸಮರ್ಥ್ ಗೆ ನರಗುಂದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಮೊದಲು ತಾಯಿ ಕ್ರಿಮಿನಾಶಕ ಸೇವನೆ ಮಾಡಿ ಬಳಿಕ ಮಕ್ಕಳಿಗೆ ಕುಡಿಸಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


