ಸುರತ್ಕಲ್‌ನಲ್ಲಿ ಪ್ರಚೋದನಕಾರಿ ಭಾಷಣ: ಬಜರಂಗದಳ ನಾಯಕಿ ಚೈತ್ರಾ ಕುಂದಾಪುರ ವಿರುದ್ಧ ಕೇಸ್ ದಾಖಲು
ಅಕ್ಟೋಬರ್ 4 ರಂದು ಸುರತ್ಕಲ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಇತರ ಸಮುದಾಯಗಳ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಜರಂಗದಳದ ನಾಯಕಿ ಚೈತ್ರಾ ಕುಂದಾಪುರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರು: ಅಕ್ಟೋಬರ್ 4 ರಂದು ಸುರತ್ಕಲ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಇತರ ಸಮುದಾಯಗಳ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಜರಂಗದಳದ ನಾಯಕಿ ಚೈತ್ರಾ ಕುಂದಾಪುರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
'ಅವಹೇಳನಕಾರಿ ಮತ್ತು ನಿಂದನೀಯ' ಭಾಷಣ ಮಾಡಿದ ಚೈತ್ರಾ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಉದ್ಯಮಿ ಅಬ್ದುಲ್ ಖಾದರ್ ಮತ್ತು ಇತರರು ದೂರು ನೀಡಿದ್ದರು.
ದೂರಿನಲ್ಲಿ, ಅವರು 'ಬಜರಂಗದಳವು ಮುಸ್ಲಿಂ ಮಹಿಳೆಯರನ್ನು ಸುಲಭವಾಗಿ ಮತಾಂತರಗೊಳಿಸಬಹುದು ಮತ್ತು ಅವರಪ ಕುಂಕುಮವನ್ನು ಧರಿಸಬಹುದು' ಎಂದು ಹೇಳಿದ್ದಾಗಿ ಆರೋಪಿಸಿದ್ದಾರೆ.
ಭಜರಂಗದಳವು ಸುರತ್ಕಲ್ ನಲ್ಲಿ ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಚೈತ್ರಾ ಕುಂದಾಪುರ ಅವರು 'ಅಸಭ್ಯ, ಅಸಂಸದೀಯ ಪದಗಳನ್ನು ಬಳಸಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.
"ಆಕೆಯ ಭಾಷಣದಲ್ಲಿ, ಒಂದು ನಿರ್ದಿಷ್ಟ ಸಮುದಾಯದ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಮತ್ತು ಅದು ಕೋಮು ಘರ್ಷಣೆಗೆ ಕಾರಣವಾಗಬಹುದು ಎಂದು ಆರೋಪಿಸಿ
ಬಂಟ್ವಾಳ ಕಾಂಗ್ರೆಸ್ ಮುಖಂಡ ಬೊಂಡಾಲ ಚಿತ್ತರಂಜನ್ ಶೆಟ್ಟಿ ಸುರತ್ಕಲ್ ಪೊಲೀಸರಿಗೆ ದೂರು ನೀಡಿದ್ದರು.
ಈ ಎಲ್ಲಾ ದೂರಿನ ಆಧಾರದ ಮೇಲೆ ಚೈತ್ರಾ ಕುಂದಾಪುರ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ(ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 505 (2) (ಕಿಡಿಗೇಡಿತನದ ಹೇಳಿಕೆಗಳು) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


