ಕೇಂದ್ರ ಸಚಿವ ಜೋಷಿ, ವಿಮಾನಯಾನ ಸಚಿವರನ್ನು ಭೇಟಿ ಮಾಡಿದ ಸಿಎಂ: ರಾಜ್ಯದ ಯೋಜನೆಗಳ ಬಗ್ಗೆ ಚರ್ಚೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ನವದೆಹಲಿಯಲ್ಲಿ ಅ.09 ರಂದು ಭೇಟಿ ಮಾಡಿ ಚರ್ಚಿಸಿದರು.

ಬೆಂಗಳುರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ನವದೆಹಲಿಯಲ್ಲಿ ಅ.09 ರಂದು ಭೇಟಿ ಮಾಡಿ ಚರ್ಚಿಸಿದರು.
ರಾಜ್ಯಕ್ಕೆ ಮಂಜೂರಾಗಿರುವ ಯೋಜನೆಗಳು, ಪ್ರಸ್ತಾವಿತ ಯೋಜನೆಗಳ ಅನುಷ್ಠಾನ ಕುರಿತಂತೆ ಮಾತುಕತೆ ನಡೆದಿದ್ದು ಈ ದಿಶೆಯಲ್ಲಿ ಕೇಂದ್ರದಿಂದ ಮತ್ತಷ್ಟೂ ಸಹಕಾರವನ್ನು ಮುಖ್ಯಮಂತ್ರಿ ಕೋರಿದರು. ಇವರ ಪ್ರಸ್ತಾವನೆಗಳ ಜಾರಿಗೆ ಸೂಕ್ತವಾಗಿ ಸ್ಪಂದಿಸುವುದಾಗಿ ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವರು ಹೇಳಿದರು ಎನ್ನಲಾಗಿದೆ.
ಇದೇ ವೇಳೆ ಸಿಎಂ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನೂ ಭೇಟಿ ಮಾಡಿ ಚರ್ಚಿಸಿದರು.
ರಾಜ್ಯಕ್ಕೆ ಮಂಜೂರಾಗಿರುವ ಯೋಜನೆಗಳು, ಪ್ರಸ್ತಾವಿತ ಯೋಜನೆಗಳ ಅನುಷ್ಠಾನ ಕುರಿತಂತೆ ಮಾತುಕತೆ ನಡೆದಿದ್ದು ಈ ದಿಶೆಯಲ್ಲಿ ಕೇಂದ್ರದಿಂದ ಮತ್ತಷ್ಟೂ ಸಹಕಾರವನ್ನು ಮುಖ್ಯಮಂತ್ರಿ ಕೋರಿದರು. ಇವರ ಪ್ರಸ್ತಾವನೆಗಳ ಜಾರಿಗೆ ಸೂಕ್ತವಾಗಿ ಸ್ಪಂದಿಸುವುದಾಗಿ ಕೇಂದ್ರ ವಿಮಾನಯಾನ ಖಾತೆ ಸಚಿವರು ಹೇಳಿದರು ಎನ್ನಲಾಗಿದೆ.
ಈ ಸಂದರ್ಭದಲ್ಲಿ ಕೇಂದ್ರ ಕಲ್ಲಿದ್ದಲು,ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನೀಲ್ ಕುಮಾರ, ಸರಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


