ಶಾಲೆಗೆ ಹೋಗುತ್ತಿದ್ದ ಬಾಲಕಿ ಅಪಹರಣ; ಐದು ಜನರಿಂದ ಸಾಮೂಹಿಕ ಅತ್ಯಾಚಾರ, ಬಂಟ್ವಾಳ ಪೊಲೀಸರಿಂದ 'ಪೋಕ್ಸೊ' ಅಡಿ ಪ್ರಕರಣ ದಾಖಲು
ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಮಾಸುವ ಮುನ್ನವೇ ಅಂತಹುದೇ ಪ್ರಕರಣವೊಂದು ಕರ್ನಾಟಕದ ಬಂಟ್ವಾಳದಲ್ಲಿ ವರದಿಯಾಗಿದೆ.

ಬಂಟ್ವಾಳ: ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಮಾಸುವ ಮುನ್ನವೇ ಅಂತಹುದೇ ಪ್ರಕರಣವೊಂದು ಕರ್ನಾಟಕದ ಬಂಟ್ವಾಳದಲ್ಲಿ ವರದಿಯಾಗಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಶಾಲೆಗೆ ತೆರಳುತ್ತಿದ್ದ ಬಾಲಕಿಯನ್ನು ಐದು ಮಂದಿ ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ.
ಬಂಟ್ವಾಳದ ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಶಾಲೆಗೆ ತೆರಳುತಿದ್ದ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಅಪಹರಿಸಲಾಗಿದೆ. ಬಳಿಕ ಅಮ್ಟಾಡಿಯದ ನಿರ್ಜನ ಪ್ರದೇಶದಲ್ಲಿ ರೂಂ ಒಂದಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎನ್ನಲಾಗಿದೆ.
ಮಾಹಿತಿ ನೀಡಿದ ಪೊಲೀಸರು
ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಾನೆ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಸಂತ್ರಸ್ತೆ ನೀಡಿರುವ ದೂರಿನಂತೆ ಶುಕ್ರವಾರ ಬೆಳಿಗ್ಗೆ ಶಾಲೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಆಕೆಗೆ ಪರಿಚಿತ ವ್ಯಕ್ತಿಯೊಬ್ಬರು ಇತರ ನಾಲ್ವರೊಂದಿಗೆ ಕಾರಿನಲ್ಲಿ ಬಂದು ಅಪಹರಿಸಿದ್ದಾರೆ. ನಂತರ ಆಕೆಯನ್ನು ಏಕಾಂತ ಸ್ಥಳದಲ್ಲಿ ಸಾಮೂಹಿಕವಾಗಿ ಅತ್ಯಾಚಾರ ಮಾಡಲಾಗಿದೆ. ನಂತರ ಆರೋಪಿಗಳು ಆಕೆಯನ್ನು ಬ್ರಹ್ಮರಕುಟ್ಲುವಿನಲ್ಲಿ ಬಿಟ್ಟು ಹೋದದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ ಎಂದು ಹೇಳಿದರು.
ಅಂತೆಯೇ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 366 (ಎ) (ಅಪಹರಣ), 376 (ಡಿ) (ಅತ್ಯಾಚಾರ) ಮತ್ತು ಪೋಕ್ಸೊ ಕಾಯಿದೆಯಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅವರ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ತಿಳಿಸಿದರು.
ಸಂತ್ರಸ್ತ ಬಾಲಕಿಯನ್ನು ಪ್ರಸ್ತುತ ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲೀಸರಿಂದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಬಾಲಕಿಯ ಹೇಳಿಕೆಯ ಆಧಾರದಲ್ಲಿ ಪೊಲೀಸರಿಗೆ ಆರೋಪಿಗಳ ಸುಳಿವು ಲಭ್ಯವಾಗಿದ್ದು, ಶೀಘ್ರ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
Related Article
ಅತ್ಯಾಚಾರ ಆರೋಪಿಗೆ ಗಲ್ಲು ಶಿಕ್ಷೆ ರದ್ಧುಗೊಳಿಸಿದ ಕರ್ನಾಟಕ ಹೈಕೋರ್ಟ್
ಅತ್ಯಾಚಾರಿಗಳ ಅಂಗಾಂಗ ಕತ್ತರಿಸುವ ಕಾನೂನನ್ನು ಭಾರತದಲ್ಲಿ ತರಲು ಸಾಧ್ಯವಿಲ್ಲ: ಸಚಿವ ಮಾಧುಸ್ವಾಮಿ
ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು; ಸಂತ್ರಸ್ತೆ ಹೇಳಿಕೆ
ಮೇಲ್ಮನೆಯಲ್ಲೂ ಮೈಸೂರು ಅತ್ಯಾಚಾರ ಪ್ರಕರಣ ಸದ್ದು; ‘ಕೇಸ್ ಮುಚ್ಚಿಹಾಕುವ ಹುನ್ನಾರವಿತ್ತೇ?'
ಮೈಸೂರು ಅತ್ಯಾಚಾರ ಪ್ರಕರಣ: ಪೊಲೀಸರ ಬೆನ್ನಿಗೆ ನಿಂತ ಗೃಹ ಸಚಿವ ಆರಗ ಜ್ಞಾನೇಂದ್ರ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


