ರಾಜ್ಯದಲ್ಲಿ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 187 ಸೇರಿ ರಾಜ್ಯದಲ್ಲಿ 451 ಪ್ರಕರಣ ಪತ್ತೆ; 9 ಸಾವು
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 451 ಹೊಸ ಕೊರೋನಾ ಸೋಂಕು ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,80,621ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 451 ಹೊಸ ಕೊರೋನಾ ಸೋಂಕು ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,80,621ಕ್ಕೆ ಏರಿಕೆಯಾಗಿದೆ.
ಮಹಾಮಾರಿಗೆ ಇಂದು 9 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,875ಕ್ಕೆ ಏರಿಕೆಯಾಗಿರುವುದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯ ಮೂಲಕ ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಇಂದು 187 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,48,157ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 1,455 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,32,322ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರೀಯ ಪ್ರಕರಣಗಳ ಸಂಖ್ಯೆ 10,395ಕ್ಕೆ ಇಳಿಕೆಯಾಗಿದೆ.
ರಾಜ್ಯಾದ್ಯಂತ ಇಂದು 1,20,045 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.37ಕ್ಕೆ ಇಳಿದಿದೆ. ರಾಜ್ಯದಲ್ಲಿ ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಶೂನ್ಯ ಕೋವಿಡ್-19 ಪ್ರಕರಣಗಳು ವರದಿಯಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


