ಲಿಖಿತ್ ಕೊಲೆ ಪ್ರಕರಣ ಬೇಧಿಸಿದ ಎಚ್ಎಎಲ್ ಪೊಲೀಸರು: 8 ಗಂಟೆಯೊಳಗೆ ಮೂವರ ಬಂಧನ
ಕೊಲೆ ನಡೆದ 8 ಗಂಟೆಯೊಳಗೆ ಪೊಲೀಸರು ಕಾರ್ಯಾಚರಣೆ ನಡೆಸಿ, ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು: ಕೊಲೆ ನಡೆದ 8 ಗಂಟೆಯೊಳಗೆ ಪೊಲೀಸರು ಕಾರ್ಯಾಚರಣೆ ನಡೆಸಿ, ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೆಚ್‌ಎಎಲ್ ಬಳಿಯ ನಿವಾಸಿ ಲಿಖಿತ್ (21) ಕೊಲೆಯಾದ ಯುವಕ. ಶುಕ್ರವಾರ ಲಾಲ್ ಬಹದ್ದೂರ್ ಶಾಸ್ತ್ರಿ ನಗರದಲ್ಲಿ ಲಿಖಿತ್ ನನ್ನು ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದು, ಲಿಖಿತ್ ಸ್ಥಳದಲ್ಲೇ ಮೃತಪಟ್ಟಿದ್ದನು.
ಘಟನೆಗೆ ಸಂಬಂಧಿಸಿದಂತೆ ಹೆಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನಯೀಮ್, ಮೋಹಿನ್, ವಸೀಮ್ ಎಂಬುವವರನ್ನು ಹೆಚ್ ಎಎಲ್ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಲೆಯಾದ ಲಿಖಿತ್ ಮತ್ತು ಆರೋಪಿಗಳು ಎಲ್ಲರೂ ಒಂದೇ ಏರಿಯಾದವರು. ಯುವಕರ ಗುಂಪುಗಳ ನಡುವೆ ಹಣ ಮತ್ತು ಯುವತಿಯ ವಿಚಾರವಾಗಿ ಗಲಾಟೆ ನೆಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಲಿಖಿತ್ ಈ ಮೊದಲು ಸಿದ್ದಿಕ್ ಎಂಬಾತನ ಬಳಿ ಸಾಲ ಪಡೆದಿದ್ದ. ಹಣ ವಾಪಸ್ಸು ಕೇಳಿದಾಗ ಕೊಡದೆ ಅವಾಚ್ಯ ಪದಗಳಿಂದ ನಿಂದಿಸಿದ್ದ. ನಯೀಮ್ ಮತ್ತು ಲಿಖಿತ್ ಒಂದೇ ಕಾಲೇಜಿನಲ್ಲಿ ಓದುತ್ತಿದ್ದರು. ಯುವತಿ ವಿಚಾರಕ್ಕೆ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು. ಇದೇ ವಿಷಯ ಲಿಖಿತ್ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


