ರಾಜ್ಯ

ರಾಜ್ಯಾದ್ಯಂತ ಕೋವಿಡ್ ಮಾರ್ಗಸೂಚಿ ವಿಸ್ತರಿಸಿ ಆದೇಶ

ಬರಲಿರುವ ಸಾಲು ಸಾಲು ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕೊರೋನಾ ನಿಯಂತ್ರಿಸಲು ಸದ್ಯ ಜಾರಿಯಲ್ಲಿರುವ ಕೋವಿಡ್ ಮಾರ್ಗಸೂಚಿಯನ್ನು ಇದೇ 25ರವರೆಗೂ ವಿಸ್ತರಿಸಿ ಆದೇಶ ಹೊರಡಿಸಿದೆ.

ರಾಜ್ಯಾದ್ಯಂತ ಕೋವಿಡ್ ಮಾರ್ಗಸೂಚಿ ವಿಸ್ತರಿಸಿ ಆದೇಶ
ಕೆಆರ್ ಮಾರುಕಟ್ಟೆ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಬರಲಿರುವ ಸಾಲು ಸಾಲು ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕೊರೋನಾ ನಿಯಂತ್ರಿಸಲು ಸದ್ಯ ಜಾರಿಯಲ್ಲಿರುವ ಕೋವಿಡ್ ಮಾರ್ಗಸೂಚಿಯನ್ನು ಇದೇ 25ರವರೆಗೂ ವಿಸ್ತರಿಸಿ ಆದೇಶ ಹೊರಡಿಸಿದೆ.

ಅಕ್ಟೋಬರ್ 25 ರವರೆಗೂ ಕೋವಿಡ್ ಕಣ್ಗಾವಲು ನಿಯಂತ್ರಣ, ಜಾಗೃತಿ ಮಾರ್ಗಸೂಚಿ ವಿಸ್ತರಿಸಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದು, ಕಣ್ಗಾವಲು, ನಿಯಂತ್ರಣ ಮತ್ತು ಜಾಗರೂಕತೆ ಮಾರ್ಗಸೂಚಿಗಳು ಇದೇ 25ರವರೆಗೂ ಮುಂದುವರೆಸಿ ಆದೇಶ ಹೊರಡಿಸಲಾಗಿದೆ. 

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆ ಬಹುತೇಕ ನಿರ್ಬಂಧಗಳನ್ನು ಸಡಿಲಗೊಳಿಸಿ ಮಾರ್ಗಸೂಚಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೋಟೆಲ್, ರೆಸ್ಟೋರೆಂಟ್, ಚಿತ್ರಮಂದಿರ, ರಂಗಮಂದಿರ, ಪಬ್ ಸೇರಿ ಎಲ್ಲೆಡೆ ಶೇ.100ರಷ್ಟು ಅವಕಾಶ ಸೇರಿ ಎಲ್ಲವೂ ವಿಸ್ತರಣೆಯಾಗಲಿದೆ.

ಹೀಗಾಗಿ ರಾಜ್ಯಾದ್ಯಂತ ಅ.25ರ ಬೆಳಗ್ಗೆ 6 ಗಂಟೆವರೆಗೆ ಹಾಲಿ ಮಾರ್ಗಸೂಚಿಗಳೇ ಅನ್ವಯವಾಗಲಿವೆ. ಇದರ ಪ್ರಕಾರ 5ನೇ ತರಗತಿ ಒಳಗಿನ ವಿದ್ಯಾರ್ಥಿಗಳಿಗೆ ಹೊರತುಪಡಿಸಿ ಉಳಿದೆಲ್ಲಾ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಮುಂದುವರೆಯಲಿವೆ. ಅದೇ ರೀತಿ ಧಾರ್ಮಿಕ ಹಾಗೂ ರಾಜಕೀಯ ಸಮಾವೇಶ, ಜಾತ್ರೆ, ಧಾರ್ಮಿಕ ಉತ್ಸವ, ಮೆರವಣಿಗೆಗಳಿಗೆ ನಿಷೇಧ ಹೇರಲಾಗಿದೆ. ಈ ಹಿನ್ನೆಲೆ ಈದ್ ಮಿಲಾದ್ ಹಾಗೂ ಮಹರ್ಷಿ ವಾಲ್ಮೀಕಿ ಜಯಂತಿ ವೇಳೆಯೂ ಸಾರ್ವಜನಿಕ ಮೆರವಣಿಗೆಗೆ ಅವಕಾಶವಿಲ್ಲ.

ಜೊತೆಗೆ ನಿರ್ದಿಷ್ಟ ಸಂಖ್ಯೆಯಲ್ಲಿ ಮಾತ್ರ ಜನರು ಭಾಗವಹಿಸಿ ಪ್ರಾರ್ಥನೆ ಅಥವಾ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.ಶಾಲಾ-ಕಾಲೇಜು, ವೈದ್ಯಕೀಯ ಕಾಲೇಜು ಮತ್ತು ಸಂಬಂತ ಸಂಸ್ಥೆಗಳ ಪುನರ್ ಆರಂಭ, ಅಗತ್ಯವಿದ್ದರೆ ಹೆಚ್ಚುವರಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಜಿಲ್ಲಾಕಾರಿಗಳಿಗೆ ಅಕಾರ ನೀಡಲಾಗಿದೆ.

ಜಲಕ್ರೀಡೆಗಳಿಗೆ ನೀಡಿರುವ ಅನುಮತಿ ಹಾಗೂ ವಸ್ತು ಪ್ರದರ್ಶನ, ಸಿನಿಮಾ ಮಂದಿರ, ಪಬ್‍ಗಳಿಗೆ ನೀಡಿರುವ ಅವಕಾಶ ಸೇರಿದಂತೆ ಎಲ್ಲಾ ಆದೇಶಗಳೂ ಅ.25ರವರೆಗೂ ವಿಸ್ತರಿಸಲಾಗಿದೆ ಎಂದು ಕಂದಾಯ ಇಲಾಖೆ ಆದೇಶದಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.