ನಗರದಲ್ಲಿ ಮುಂದಿನ 48 ಗಂಟೆ ಕಾಲ ಭಾರೀ ಮಳೆ: ‘ಯೆಲ್ಲೊ ಅಲರ್ಟ್’ ಮುಂದುವರಿಕೆ
ಅಂಡಮಾನ್ ಬಳಿ ವಾಯುಭಾರ ಕುಸಿತ ಸಂಭವ ಇದ್ದು, ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ಅಂಡಮಾನ್ ಬಳಿ ವಾಯುಭಾರ ಕುಸಿತ ಸಂಭವ ಇದ್ದು, ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಅಂಡಮಾನ್ ಸಮುದ್ರದ ಮೇಲೆ ಸಮುದ್ರದ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ ಮೇಲ್ಮೈ ಸುಳಿಗಾಳಿಯೊಂದು ಸೃಷ್ಟಿಯಾಗಿದ್ದು, ಸೋಮವಾರ ಇದು ವಾಯುಭಾರ ಕುಸಿತವಾಗಿ ಪರಿವರ್ತನೆಯಾಗುವ ಸಾಧ್ಯತೆಗಳಿವೆ. ಬಳಿಕ ಉತ್ತರ ಆಂಧ್ರ ಮತ್ತು ದಕ್ಷಿಣ ಒಡಿಶಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿವೆ. ಅದೇ ರೀತಿ ಪೂರ್ವ ಮಧ್ಯ ಅರಬ್ಬೀ ಸಮುದ್ರದಲ್ಲಿ ಸಮುದ್ರ ಮಟ್ಟದಿಂದ ಸುಮಾರು 5.8 ಕಿಮೀವರೆಗೂ ಮೇಲ್ಮೈ ಸುಳಿಗಾಳಿ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಇನ್ನು ಬೆಂಗಳೂರಿನಲ್ಲಿ ಕಳೆದ 3 ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಭಾನುವಾರ ಮಧ್ಯಾಹ್ನ ಮತ್ತು ಸಂಜೆ ನಗರದಲ್ಲಿ 13 ಎಂಎಂ ಮಳೆಯಾಗಿದೆ. ಹೆಚ್ಎಎಲ್ ನಲ್ಲಿ 11.2 ಎಂಎಂ ಮಳೆಯಾಗಿದೆ. ಭಾರೀ ಮಳೆಯಿಂದಾಗಿ ಕೆಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ, ಮರಗಳು ನೆಲಕ್ಕುರುಳಿ ಅವಾಂತರ ಸೃಷ್ಟಿಯಾಗಿತ್ತು. ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, 64.5 ಎಂಎಂ-115.5 ಎಂಎಂನಷ್ಟು ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಎರಡೂ ದಿನ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


