ರಾಜ್ಯದಲ್ಲಿ ಕೊರೋನಾ ತೀವ್ರ ಇಳಿಕೆ: 373 ಹೊಸ ಪ್ರಕರಣ ಪತ್ತೆ, 611 ಚೇತರಿಕೆ, 10 ಸಾವು
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಇಳಿಕೆ ಕಂಡುಬಂದಿದೆ. ಕಳೆದ 24 ಗಂಟೆಗಳಲ್ಲಿ 373 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,81,400ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಇಳಿಕೆ ಕಂಡುಬಂದಿದೆ. ಕಳೆದ 24 ಗಂಟೆಗಳಲ್ಲಿ 373 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,81,400ಕ್ಕೆ ಏರಿಕೆಯಾಗಿದೆ.
611 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 29,33,570ಕ್ಕೆ ಏರಿಕೆಯಾಗಿದೆಯ ರಾಜ್ಯದಲ್ಲಿ ಸದ್ಯ 9906 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಇಂದು ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 37,895ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇಕಡಾ 0.45 ರಷ್ಟಿದ್ದು, ಮರಣ ಪ್ರಮಾಣ ಶೇ. 2.68 ರಷ್ಟಿದೆ.
ಬೆಂಗಳೂರಿನಲ್ಲಿ 146 ಹೊಸ ಪ್ರಕರಣ ಪತ್ತೆಯಾಗಿದ್ದು, 210 ಸೋಂಕಿತರು ಗುಣಮುಖರಾಗಿದ್ದಾರೆ. ಐವರು ಸಾವನ್ನಪ್ಪಿದ್ದಾರೆ. ಬಾಗಲಕೋಟೆ, ಚಿಕ್ಕಮಗಳೂರು, ಗದಗ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


