ಕೆಪಿಟಿಸಿಎಲ್ ನ 1899 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಸುನೀಲ್ ಕುಮಾರ್
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 1899 ಕಿರಿಯ ಪವರ್ ಮ್ಯಾನ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 1899 ಕಿರಿಯ ಪವರ್ ಮ್ಯಾನ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಕಾವೇರಿ ಭವನದಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ದ ಸಭಾಂಗಣದಲ್ಲಿ ಈ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡಿ ಮಾತನಾಡಿದ ಅವರು, ಮೊದಲ ಹಂತವಾಗಿ ಇಂದು ಸಾಂಕೇತಿಕವಾಗಿ 21 ಜನರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಗಿದೆ ಎಂದರು.
ಕೆಪಿಟಿಸಿಎಲ್ ನ 1899 ಹುದ್ದೆಗಳಿಗೆ 2019ರ ಫೆಬ್ರವರಿಯಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು, ಅಂದಿನಿಂದ ಇಂದಿನವರೆಗೂ ಈ ನೇಮಕಾತಿ ಪ್ರಕ್ರಿಯೆ ನಾನಾ ಕಾರಣಗಳಿಗಾಗಿ ನೆನೆಗುದಿಗೆ ಬಿದ್ದಿತ್ತು, ಈ ಬಗ್ಗೆ ಅನೇಕರು ನನ್ನ ಗಮನ ಸೆಳೆದರು. ಕೂಡಲೇ ಅಗತ್ಯವಾದ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ, ಆದೇಶ ಪತ್ರ ನೀಡುವಂತೆ ಸೂಚನೆ ನೀಡಿದ್ದೆ, ಅದರಂತೆ ಇಂದು 21 ಜನ ಕಿರಿಯ ಪವರ್ ಮ್ಯಾನ್ ಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ ಎಂದು ಹೇಳಿದರು.
ಶೀಘ್ರದಲ್ಲೇ ಉಳಿದ 1878 ಜನರಿಗೆ ನೇಮಕಾತಿ ಆದೇಶ ನೀಡಲಾಗುವುದು. ಬಿಜೆಪಿ ಸರ್ಕಾರ ಬಂದ ನಂತರ ಅತಿ ದೊಡ್ಡ ಪ್ರಮಾಣದಲ್ಲಿ ಈ ನೇಮಕ ಪ್ರಕ್ರಿಯೆ ನಡೆದಿರುವುದು ವೈಯಕ್ತಿಕವಾಗಿ ನನಗೆ ಸಂತೋಷ ತಂದಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


