ಸ್ಯಾಂಡಲ್ ವುಡ್ ಸಮಸ್ಯೆ ಪರಿಹಾರಕ್ಕೆ ಗೃಹಸಚಿವರಿಗೆ ಕೆಎಫ್‍ಸಿಸಿ ಮನವಿ
ಚಂದನವನದಲ್ಲಿ ಪೈರಸಿ ಸೇರಿದಂತೆ ಹಲವು ಸಮಸ್ಯೆಗಳಿದ್ದು, ಈ ಕುರಿತು ಗೃಹ ಸಚಿವರೊಡನೆ ಚರ್ಚಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ.

ಬೆಂಗಳೂರು: ಚಂದನವನದಲ್ಲಿ ಪೈರಸಿ ಸೇರಿದಂತೆ ಹಲವು ಸಮಸ್ಯೆಗಳಿದ್ದು, ಈ ಕುರಿತು ಗೃಹ ಸಚಿವರೊಡನೆ ಚರ್ಚಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ.
ಈ ಸಂಬಂಧ ಬುಧವಾರ ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ ರವರನ್ನು ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಭೇಟಿ ಮಾಡಿ ಉದ್ಯಮದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅವಕಾಶಕ್ಕೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಎನ್ ಎಂ ಸುರೇಶ್, ಉಮೇಶ್ ಬಣಕಾರ್, ನಾಗಣ್ಣ ಸಾ ರಾ ಗೋವಿಂದು ಮತ್ತಿತರರು ಉಪಸ್ಥಿತರಿದ್ದರು. ಕಳೆದ ವಾರವಷ್ಟೆ ತೆರೆ ಕಂಡಿರುವ ಡಾ. ರಾಜ್ ಕುಮಾರ್ ಮೊಮ್ಮಗಳು ಧನ್ಯಾ ರಾಮ್ ಕುಮಾರ್ ಹಾಗೂ ಸೂರಜ್ ಗೌಡ ಅಭಿನಯದ "ನಿನ್ನ ಸನಿಹಕೆ" ಸಿನಿಮಾ ಪೈರಸಿ ಆಗಿದ್ದು ಟೆಲಿಗ್ರಾಮ್ ನಲ್ಲಿ ಅಪ್ ಲೋಡ್ ಮಾಡಲಾಗಿದೆ.
ಅಲ್ಲದೆ ಲೂಸ್ ಮಾದ ಯೋಗೇಶ್ ನಟಿಸಿರೋ ಲಂಕೆ, ಅಜಯ್ ರಾವ್ ಅಭಿನಯದ ಕೃಷ್ಣ ಟಾಕೀಸ್ ಹಾಗೂ ನಟ ಚೇತನ್ ಚಂದ್ರ ಅಭಿನಯಿಸಿರೋ ಶಾರ್ದೂಲ ಚಿತ್ರ ಕೂಡ ಪೈರಸಿಯಾಗಿದೆ. ಕೇವಲ ಪೈರಸಿ ಮಾತ್ರವಲ್ಲದೆ ಇನ್ನಿತರ ಸಮಸ್ಯೆಗಳ ಚರ್ಚಿಸಲು ಕರ್ನಾಟಕ ವಾಣಿಜ್ಯ ಮಂಡಳಿ ಮುಂದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


