ದಸರಾ ಹಬ್ಬದಂದೇ ಭೀಕರ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಇಬ್ಬರ ದುರ್ಮರಣ
ದಸರಾ ಹಬ್ಬದಂದೇ ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರೂ ಸವಾರರು ಮೃತಪಟ್ಟಿರುವ ಘಟನೆ ತಾಲೂಕಿನ ನಲ್ಲಬಂಡಾ ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ.

ರಾಯಚೂರು: ದಸರಾ ಹಬ್ಬದಂದೇ ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರೂ ಸವಾರರು ಮೃತಪಟ್ಟಿರುವ ಘಟನೆ ತಾಲೂಕಿನ ನಲ್ಲಬಂಡಾ ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ.
ಮೃತರನ್ನು ದೀಪಕ್ (22), ಹುಸೇನ್ (23) ಎಂದು ಗುರುತಿಸಲಾಗಿದೆ. ಮೃತರು ರಾಯಚೂರು ನಗರದ ತಿಮ್ಮಾಪೂರ ಪೇಟೆ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.
ತಮ್ಮ ಸಹೋದರನನ್ನು ಬೈಕ್‌ನಲ್ಲಿ ಕರೆದುಕೊಂಡು ಬರಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಯರಗೇರಾ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


