ರಾಜ್ಯ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಇಳಿಕೆ: 264 ಹೊಸ ಪ್ರಕರಣ ಪತ್ತೆ; 421 ಚೇತರಿಕೆ, 6 ಸಾವು

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2, 98, 3133ಕ್ಕೆ ಏರಿಕೆಯಾಗಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಇಳಿಕೆ: 264 ಹೊಸ ಪ್ರಕರಣ ಪತ್ತೆ; 421 ಚೇತರಿಕೆ, 6 ಸಾವು
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ಬಳಿ ಸ್ವಾಬ್ ಸಂಗ್ರಹಿಸುತ್ತಿರುವ ಆರೋಗ್ಯ ಕಾರ್ಯಕರ್ತರೊಬ್ಬರ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2, 98, 3133ಕ್ಕೆ ಏರಿಕೆಯಾಗಿದೆ.

421 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 9,508 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ ಇಂದು 6 ಮಂದಿ ಮೃತಪಟ್ಟಿದ್ದು, ಮೃತರ ಒಟ್ಟಾರೇ ಸಂಖ್ಯೆ 37, 937ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.43 ರಷ್ಟಿದ್ದು, ಮರಣ ಪ್ರಮಾಣ ಶೇ. 2.27 ರಷ್ಟಿದೆ. ಬೆಂಗಳೂರಿನಲ್ಲಿ 121 ಹೊಸ ಪ್ರಕರಣ ಪತ್ತೆಯಾಗಿದ್ದು, 132 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. 

ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೀದರ್, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. ಬೆಂಗಳೂರು ಹೊರತುಪಡಿಸಿದರೆ ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಸಾಕಷ್ಟು ಇಳಿಕೆಯಾಗಿದೆ. 

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.