ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ. ಶಶಿಕಲಾ ಸೋದರಳಿಯ ಇಂದು ಜೈಲಿನಿಂದ ಬಿಡುಗಡೆ
ಎಐಎಡಿಎಂಕೆ ಮಾಜಿ ನಾಯಕಿ ವಿಕೆ.ಶಶಿಕಲಾ ಸೋದರಳಿಯ ಹಾಗೂ ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಅವರು ದತ್ತು ಪುತ್ರ ಸುಧಾಕರನ್ ಅವರಿಗೆ ಕೊನೆಗೂ ಬಿಡುಗಡೆ ಭಾಗ್ಯ ದೊರೆತಿದೆ.

ಬೆಂಗಳೂರು: ಎಐಎಡಿಎಂಕೆ ಮಾಜಿ ನಾಯಕಿ ವಿಕೆ.ಶಶಿಕಲಾ ಸೋದರಳಿಯ ಹಾಗೂ ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಅವರು ದತ್ತು ಪುತ್ರ ಸುಧಾಕರನ್ ಅವರಿಗೆ ಕೊನೆಗೂ ಬಿಡುಗಡೆ ಭಾಗ್ಯ ದೊರೆತಿದೆ.
ರೂ.10 ಕೋಟಿ ದಂಡ ಕಟ್ಟದೆ 1 ವರ್ಷ ಹೆಚ್ಚುವರಿಯಾಗಿ ಜೈಲು ಶಿಕ್ಷೆ ಅನುಭವಿಸಿದ್ದ ಸುಧಾಕರನ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಅ.16 ರಂದು ತಲೈವಿಯ ದತ್ತು ಪುತ್ರ ಸುಧಕಾರನ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಸುಧಕಾರನ್ ಬಿಡುಗಡೆ ಬಗ್ಗೆ ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳು ದಿನಾಂಕ ನಿಗದಿ ಮಾಡಿದ್ದಾರೆ. ಶಶಿಕಲಾ ಲಿನಿಂದ ಬಿಡುಗಡೆ ಬಳಿಕ ಸುಧಾಕರನ್ ಭೇಟಿಗೆ ಯಾರು ಬಂದಿರಲಿಲ್ಲ ಎಂದು ತಿಳಿದು ಬಂದಿದೆ. ರೂ.10 ಕೋಟಿ ದಂಡ ಕಟ್ಟದೆ ಮತ್ತೊಂದು ವರ್ಷ ಹೆಚ್ಚುವರಿ ಜೈಲುವಾಸ ಇಂದಿಗೆ ಮುಕ್ತಾಯವಾಗಲಿದೆ.
ಅಕ್ರಮ ಆಸ್ತಿ ಸಂಪಾದನೆ ಆರೋಪದಲ್ಲಿ ಸುಧಾಕರನ್‌ಗೆ ನಾಲ್ಕು ವರ್ಷ ಜೈಲು ಶಿಕ್ಷೆ ನೀಡಲಾಗಿತ್ತು. 2017 ರಲ್ಲಿ ಶಶಿಕಲಾ, ಇಳವರಸಿ, ಸುಧಾಕರನ್‌ಗೆ 10 ಕೋಟಿ ದಂಡ ವಿಧಿಸಲಾಗಿತ್ತು.
ಶಶಿಕಲಾ ಮತ್ತು ಇಳವರಸಿ ಇಬ್ಬರಿಗೂ 10 ಕೋಟಿಯಂತೆ ದಂಡ ಕಟ್ಟಿ ಬಿಡುಗಡೆ ಹೊಂದಿದ್ದರು. ಸುಧಾಕರನ್ ದಂಡ ಕಟ್ಟದ ಹಿನ್ನಲೆ 1 ವರ್ಷ ಹೆಚ್ಚು ಜೈಲುವಾಸ ಮುಂದುವರಿಸಲಾಗಿತ್ತು. ಇದೀಗ ಹೆಚ್ಚುವರಿ ಜೈಲು ಶಿಕ್ಷೆ ಮುಕ್ತಾಯಗೊಂಡಿದ್ದು, ಇಂದು ಸೆರೆವಾಸದಿಂದ ಮುಕ್ತಗೊಳ್ಳಲಿದ್ದಾರೆ.
ಅಪರಾಧಿಗಳನ್ನು ಬಿಡುಗಡೆ ಮಾಡುವಾಗ ಅವರು ತೆಗೆದುಕೊಂಡ ರಜೆಗಳ ಸಂಖ್ಯೆಯನ್ನು (ಪೆರೋಲ್) ನಾವು ಪರಿಗಣಿಸುತ್ತೇವೆ. ಸುಧಾಕರನ್ 89 ದಿನಗಳ ಪೆರೋಲ್‌ಗೆ ಅರ್ಹರಾಗಿದ್ದರು ಆದರೆ, ಅವರು ಒಂದು ಸಲವೂ ಪೆರೋಲ್ ಮೇಲೆ ಹೊರ ಹೋಗಿಲ್ಲ. ಹೀಗಾಗಿ ಅವರ ಶಿಕ್ಷೆಯನ್ನು 89 ದಿನಗಳವರೆಗೆ ಕಡಿಮೆ ಮಾಡಲಾಗಿದೆ. ಈ ಕಾರಣದಿಂದಾಗಿ, ಮುಂದಿನ ವರ್ಷ ಜನವರಿಯಲ್ಲಿ ಬಿಡುಗಡೆಯಾಗಬೇಕಿದ್ದ ಸುಧಾಕರನ್ ಅವರನ್ನು ಶನಿವಾರ ಬಿಡುಗಡೆ ಮಾಡಲಾಗುತ್ತಿದೆ ಎಂದು ಜೈಲಿನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


