ರಾಜ್ಯದಲ್ಲಿ ಕೊರೋನಾ ಏರಿಳಿತ: ನಿನ್ನೆಗಿಂತ ತುಸು ಏರಿಕೆ; 326 ಹೊಸ ಪ್ರಕರಣ, 380 ಚೇತರಿಕೆ, 4 ಸಾವು
ರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದೆ. ನಿನ್ನೆಗಿಂತ ಇಂದು ತುಸು ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 326 ಹೊಸ ಪ್ರಕರಣ ಪತ್ತೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದೆ. ನಿನ್ನೆಗಿಂತ ಇಂದು ತುಸು ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 326 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98, 3459 ಕ್ಕೆ ಏರಿಕೆಯಾಗಿದೆ.
380 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಒಟ್ಟು ಬಿಡುಗಡೆಯಾದವರ ಸಂಖ್ಯೆ 2,93,6039ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 9, 450 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿನಿಂದ ಇಂದು ನಾಲ್ಕು ಮಂದಿ ಮೃತಪಟ್ಟಿದ್ದು, ಮೃತರ ಒಟ್ಟು ಸಂಖ್ಯೆ 37,941ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.41 ರಷ್ಟಿದ್ದು, ಮರಣ ಪ್ರಮಾಣ ಶೇ 1.22 ರಷ್ಟಿದೆ. ಬೆಂಗಳೂರಿನಲ್ಲಿ 173 ಹೊಸ ಪ್ರಕರಣ ಪತ್ತೆಯಾಗಿದ್ದು, 87 ಸೋಂಕಿತರು ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಓರ್ವ ಸೋಂಕಿತ ಮೃತಪಟ್ಟಿದ್ದಾರೆ.
ಬಾಗಲಕೋಟೆ, ಬೀದರ್, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ, ರಾಮನಗರ, ವಿಜಯಪುರ ಹಾಗೂ ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


