ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 161 ಸೇರಿ 349 ಕೇಸ್ ಪತ್ತೆ; 14 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 349 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,84,022ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 349 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,84,022ಕ್ಕೆ ಏರಿಕೆಯಾಗಿದೆ.
ಮಹಾಮಾರಿಗೆ ಇಂದು 14 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,967ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಇಂದು 161 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,49,662ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 399 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,36,926ಕ್ಕೆ ಏರಿಕೆಯಾಗಿದೆ. ಇನ್ನು 9,100 ಸಕ್ರೀಯ ಪ್ರಕರಣಗಳಿವೆ.
ರಾಜ್ಯಾದ್ಯಂತ ಇಂದು 85,022 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 349 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.41ಕ್ಕೆ ಇಳಿದಿದೆ.
Covid numbers in Karnataka today:
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


