ಬಸವರಾಜ ಬೊಮ್ಮಾಯಿ ಅದೃಷ್ಟದ ಸಿಎಂ, ಬಿಎಸ್ವೈ ಅನುಭವಿ ಮುಖ್ಯಮಂತ್ರಿ: ಮುರುಘಾ ಶ್ರೀಗಳು
ಕೆಲವು ಸಂತರ ಜೀವಿತಾವಧಿ ಕಡಿಮೆ ಇದ್ದರೂ ಅವರು ಮಹತ್ವದ ಸಾಧನೆಗಳನ್ನು ಮಾಡಿ ಸಮಾಜಕ್ಕೆ ಮಾರ್ಗದರ್ಶನ ಮಾಡಿದ್ದಾರೆ ಎಂದು ಮುರುಘಾ ಮಠದ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ.

ಚಿತ್ರದುರ್ಗ: ಕೆಲವು ಸಂತರ ಜೀವಿತಾವಧಿ ಕಡಿಮೆ ಇದ್ದರೂ ಅವರು ಮಹತ್ವದ ಸಾಧನೆಗಳನ್ನು ಮಾಡಿ ಸಮಾಜಕ್ಕೆ ಮಾರ್ಗದರ್ಶನ ಮಾಡಿದ್ದಾರೆ ಎಂದು ಮುರುಘಾ ಮಠದ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ.
ಶರಣ ಸಂಸ್ಕೃತಿ ಉತ್ಸವದ ಸಮಾರೋಪ ಹಾಗೂ ಮುರುಘಾ ಶ್ರೀಗಳ ಪೀಠಾರೋಹಣದ ತೃತೀಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಗಳು, ಕಡಿಮೆ ಸಮಯದಲ್ಲಿ ಹೆಚ್ಚು ಸಾಧನೆ ಮಾಡಿದವರಲ್ಲಿ ಸ್ವಾಮಿ ವಿವೇಕಾನಂದ ಅಂತವರಲ್ಲಿ ಒಬ್ಬರು, ಇಡೀ ವಿಶ್ವವೇ ಅವರನ್ನು ಮೆಚ್ಚುತ್ತದೆ, 12 ನೇ ಶತಮಾನದ ಸಮಾಜ ಸುಧಾರಕ ಬಸವಣ್ಣ ಸಮಾಜಕ್ಕೆ ಮಾರ್ಗದರ್ಶನ ಮಾಡಲು ವಚನಗಳನ್ನು ಬರೆದರು ಮತ್ತು ಸಮಾನತೆಯ ಸಮಾಜವನ್ನು ನಿರ್ಮಿಸಲು ಚಳುವಳಿಯನ್ನು ಆರಂಭಿಸಿದರು ಎಂದು ಹೇಳಿದರು.
ಬಸವರಾಜ ಬೊಮ್ಮಾಯಿ ಅವರನ್ನು ಅದೃಷ್ಟವಂತ ಸಿಎಂ ಮತ್ತು ಬಿಎಸ್ ಯಡಿಯೂರಪ್ಪ ಅನುಭವಿ ಮುಖ್ಯಮಂತ್ರಿ ಎಂದು ಸ್ವಾಮೀಜಿ ಬಣ್ಣಿಸಿದರು. ಬೊಮ್ಮಾಯಿ ಅವರ ಅದೃಷ್ಟ ಮತ್ತು ಯಡಿಯೂರಪ್ಪನವರ ಅನುಭವ ಚಿತ್ರದುರ್ಗ ಜಿಲ್ಲೆಯನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯಲಿ ಎಂದು ಆಶಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


