ರಾಜ್ಯ

ವಿಜಯಪುರ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಒಂದೇ ಕುಟುಂಬದ ನಾಲ್ವರು ಸೇರಿ ಐವರ ದುರ್ಮರಣ

ನಿಂತ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಅದರಲ್ಲಿದ್ದ ಒಂದೇ ಕುಟುಂಬದ ನಾಲ್ವರು ಹಾಗೂ ಲಾರಿ ಚಾಲಕ ಸೇರಿ ಐವರು ಮೃತಪಟ್ಟಿರುವ ದಾರುಣ ಘಟನೆ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದೆ.

ವಿಜಯಪುರ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಒಂದೇ ಕುಟುಂಬದ ನಾಲ್ವರು ಸೇರಿ ಐವರ ದುರ್ಮರಣ
ಸಾಂದರ್ಭಿಕ ಚಿತ್ರ
Published On :

ವಿಜಯಪುರ: ನಿಂತ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಅದರಲ್ಲಿದ್ದ ಒಂದೇ ಕುಟುಂಬದ ನಾಲ್ವರು ಹಾಗೂ ಲಾರಿ ಚಾಲಕ ಸೇರಿ ಐವರು ಮೃತಪಟ್ಟಿರುವ ದಾರುಣ ಘಟನೆ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದೆ.

ನಗರದ ಸಾಯಿಪಾರ್ಕ್ ನಿವಾಸಿ, ವೃತ್ತಿಯಲ್ಲಿ ಶಿಕ್ಷಕನಾಗಿದ್ದ ಮಂಜುನಾಥ ಮುಂಡೇವಾಡಿ (42), ಪತ್ನಿ ಸಾವಿತ್ರಿ (37), ಪುತ್ರಿ ಆರಾಧ್ಯಾ (08) ಆಯುಕ್ತಾ (4) ಹಾಗೂ ಕೆಟ್ಟು ನಿಂತಿದ್ದ ಲಾರಿ ರಿಪೇರಿ ಮಾಡುತ್ತಿದ್ದ ಮಹಾರಾಷ್ಟ್ರ ಬೀಡ್‌ ಜಿಲ್ಲೆಯ ಲಾರಿ ಚಾಲಕ ಥಾಯಿರ್‌ ಪಠಾಣ (33) ಮೃತ ದುರ್ದೈವಿಗಳು.

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಪುತ್ರರಾದ ಅಪ್ಪುಗೌಡ ಹಾಗೂ ಆಯುಕ್ತಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು‌. ಆದರೆ ಚಿಕಿತ್ಸೆ ಫಲಿಸದೇ ಆಯುಕ್ತಾ ಕೊನೆಯುಸಿರೆಳೆದಿದ್ದಾಳೆ. ಇವಳೊಂದಿಗೆ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೇರಿದಂತಾಯಿತು.

ಮಂಜುನಾಥ ಕುಟುಂಬ ಸದಸ್ಯರು ಪ್ರವಾಸಕ್ಕೆ ಗೋವಾಕ್ಕೆ ತೆರಳಿದ್ದರು. ಗೋವಾದಿಂದ ಬುಧವಾರ ಬೆಳಗ್ಗೆ ವಿಜಯಪುರಕ್ಕೆ ಮರಳುತ್ತಿದ್ದರು.  ನಿದ್ರೆಯಿಲ್ಲದ್ದರಿಂದಾಗಿ ಕಾರು ಚಲಾಯಿಸುತ್ತಿದ್ದ ಮಂಜುನಾಥ ಮುಂಡೇವಾಡಿ ವಿಜಯಪುರ ಸಮೀಪಿಸುತ್ತಿದ್ದಂತೆಯೇ ನಿದ್ರೆಯ ಮಂಪರಿಯಲ್ಲಿ ಬಲ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ರಭಸದಿಂದ ಡಿಕ್ಕಿ ಹೊಡೆಸಿದ್ದರಿಂದ, ಕಾರು ಲಾರಿಯಡಿ ಸಿಲುಕಿ ನಜ್ಜು- ಗುಜ್ಜಾಗಿದೆ. ಮಾತ್ರವಲ್ಲ, ಲಾರಿ ದುರಸ್ತಿ ಮಾಡುತ್ತಿದ್ದ ಅಮಾಯಕ ಚಾಲಕನೂ ಕಾರಿನ ರಭಸಕ್ಕೆ ಸ್ಥಳದಲ್ಲೇ ಅಸುನೀಗಿದ್ದಾನೆ ವಿಜಯಪುರ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.