ಉಪಚುನಾವಣೆಗೂ ಮುನ್ನವೇ ಮೀಸಲಾತಿ ವರದಿ ಪಡೆಯಿರಿ: ಸರ್ಕಾರದ ಮೇಲೆ ಸ್ವಾಮೀಜಿ ಒತ್ತಡ
ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಉಪ ಚುನಾವಣೆಯ ಮತದಾನಕ್ಕೆ ಮುನ್ನವೇ ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿ ನೀಡುವ ಕುರಿತು ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ತರಿಸಿಕೊಳ್ಳಬೇಕು ಎಂದು ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಉಪ ಚುನಾವಣೆಯ ಮತದಾನಕ್ಕೆ ಮುನ್ನವೇ ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿ ನೀಡುವ ಕುರಿತು ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ತರಿಸಿಕೊಳ್ಳಬೇಕು ಎಂದು ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಅಕ್ಟೋಬರ್ 30ರಂದು ಮತದಾನ ನಡೆಯಲಿದೆ. ಇದಕ್ಕೂ ಮುನ್ನವೇ ಸರ್ಕಾರ ಕ್ರಮ ಕೈಗೊಳ್ಳಬೇಕು. ಇದು ರಾಜಕೀಯ ಒತ್ತಡ ಅಲ್ಲ. ಸಮುದಾಯದ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದೇವೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಹಾನಗಲ್ ಕ್ಷೇತ್ರದಲ್ಲಿ ಸುಮಾರು 46 ಸಾವಿರ ಮತ್ತು ಸಿಂದಗಿಯಲ್ಲಿ ಸುಮಾರು 36 ಸಾವಿರ ಪಂಚಮಸಾಲಿ ಸಮುದಾಯದ ಮತದಾರರಿದ್ದಾರೆ. ಹಾನಗಲ್ ನಲ್ಲಿ ನಮ್ಮ ಸಮುದಾಯಕ್ಕೆ ಬಿಜೆಪಿ ಟಿಕೆಟ್ ನೀಡಿಲ್ಲ. ಮುಖ್ಯಮಂತ್ರಿ ಹುದ್ದೆ ಸಹ ಸಮುದಾಯಕ್ಕೆ ನೀಡಿಲ್ಲ. ಹೀಗಾಗಿ ಸಮುದಾಯದಲ್ಲಿ ಅಸಮಾಧಾನವಾಗಿದೆ ಎಂದರು. ಮೀಸಲಾತಿಗಾಗಿ ಹೋರಾಟ ಮುಂದುವರಿಯಲಿದ್ದು, ಈಗಾಗಲೇ ಅ.13ರಿಂದ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಆರಂಭಿಸಲಾಗಿದೆ. 2022ರ ಜನವರಿ 14ರವರೆಗೆ ಈ ಅಭಿಯಾನ ನಡೆಯಲಿದೆ ಎಂದರು.
ಮುಖ್ಯಮಂತ್ರಿಗಳು ಮೀಸಲಾತಿ ಸಂಬಂಧ ಭರವಸೆ ನೀಡಿದ್ದರು. ಹೀಗಾಗಿ ಮತ್ತಷ್ಟು ವಿಳಂಬ ಮಾಡುವುದು ಬೇಡ, ಉಪಚುನಾವಣೆ ನಡೆಯುತ್ತಿರುವ ಸಿಂದಗಿ ಮತ್ತು ಹಾನಗಲ್ ನಲ್ಲಿ ಪಂಚಮಸಾಲಿ ಮತಗಳಿವೆ, ಸಮಿತಿ ವರದಿ ಬರದೇ ಇರುವುದಕ್ಕೆ ಜನರಲ್ಲಿ ಅಸಮಾಧಾನವಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


