ರಾಜ್ಯ

ರಾಜ್ಯದಲ್ಲಿಂದು ಕೊರೋನಾಗೆ 11 ಮಂದಿ ಸಾವು; 378 ಹೊಸ ಸೋಂಕಿತರು ಪತ್ತೆ; 464 ಚೇತರಿಕೆ; 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 378 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 2,98, 5227ಕ್ಕೆ ಏರಿಕೆಯಾಗಿದೆ. 464 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8,891 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿಂದು ಕೊರೋನಾಗೆ 11 ಮಂದಿ ಸಾವು; 378 ಹೊಸ ಸೋಂಕಿತರು ಪತ್ತೆ; 464 ಚೇತರಿಕೆ; 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 378 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 2,98, 5227ಕ್ಕೆ ಏರಿಕೆಯಾಗಿದೆ. 464 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8,891 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ ಇಂದು 11 ಮಂದಿ ಸಾವನ್ನಪ್ಪಿದ್ದು, ಒಟ್ಟಾರೇ ಮೃತರ ಸಂಖ್ಯೆ 37,995ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.36 ರಷ್ಟಿದ್ದು, ಮರಣ ಪ್ರಮಾಣ ಶೇ. 2.91 ರಷ್ಟಿದೆ. ಬೆಂಗಳೂರಿನಲ್ಲಿ 195 ಹೊಸ ಪ್ರಕರಣ ಪತ್ತೆಯಾಗಿದ್ದು, 239 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಏಳು ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಮನಗರ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.