ರಾಜ್ಯ

ಪಟಾಕಿಗಳ ವಿರುದ್ಧ ಜಾಹೀರಾತು: ಬಾಲಿವುಡ್ ನಟ ಅಮಿರ್ ಖಾನ್ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ ಕಿಡಿ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸದಿರಿ ಎಂದು ಜಾಹೀರಾತೊಂದರಲ್ಲಿ ಬಾಲಿವುಡ್ ನಟ ಅಮೀರ್ ಖಾನ್ ಅವರು ಮನವಿ ಮಾಡಿಕೊಂಡಿರುವುದಕ್ಕೆ ಸಂಸದ ಅನಂತ್ ಕುಮಾರ್ ಹೆಗಡೆಯವರು ತೀವ್ರವಾಗಿ ಕಿಡಿಕಾರಿದ್ದಾರೆ.

ಪಟಾಕಿಗಳ ವಿರುದ್ಧ ಜಾಹೀರಾತು: ಬಾಲಿವುಡ್ ನಟ ಅಮಿರ್ ಖಾನ್ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ ಕಿಡಿ
ಅಮಿರ್ ಖಾನ್
Published On :

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸದಿರಿ ಎಂದು ಜಾಹೀರಾತೊಂದರಲ್ಲಿ ಬಾಲಿವುಡ್ ನಟ ಅಮೀರ್ ಖಾನ್ ಅವರು ಮನವಿ ಮಾಡಿಕೊಂಡಿರುವುದಕ್ಕೆ ಸಂಸದ ಅನಂತ್ ಕುಮಾರ್ ಹೆಗಡೆಯವರು ತೀವ್ರವಾಗಿ ಕಿಡಿಕಾರಿದ್ದಾರೆ.

ಈ ಕುರಿತು ಜಾಹೀರಾತು ಕಂಪನಿಗೆ ಪತ್ರವನ್ನು ಬರೆದಿರುವ ಅನಂತ್ ಕುಮಾರ್ ಹೆಗಡೆಯವರು, ತಮ್ಮ ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ.

ಪರಿಸರವಾದಿ, ಪ್ರಾಣಿಪ್ರೇಮಿ ಅಮೀರ್ ಖಾನ್ ಅಭಿನಯಿಸಿರುವ ಜಾಹೀರಾತು ಒಂದರಲ್ಲಿ ದೀಪಾವಳಿ ಹಬ್ಬದಲ್ಲಿ ಹಿಂದುಗಳಿಗೆ ಪಟಾಕಿ ಸಿಡಿಸದಂತೆ ಮನವಿ ಮಾಡಿದ್ದಾರೆ. ಅವರು ಪರಿಸರ ಹಾಗೂ ಪ್ರಾಣಿಗಳ ಬಗ್ಗೆ ತೋರುತ್ತಿರುವ ಕಾಳಜಿಗೆ ನನ್ನ ಮೆಚ್ಚುಗೆ! ಅದರಂತೆ ಅನ್ಯಧರ್ಮಗಳಲ್ಲಿ (ತಾನು ಪ್ರತಿಪಾದಿಸುವ ಧರ್ಮವನ್ನು ಹಿಡಿದು) ನಡೆಯುವ ಎಷ್ಟೋ ಆಚರಣೆಗಳ ಬಗ್ಗೆ ಏಕೆ ಮೌನ?

ಈ ಜಾಹಿರಾತನ್ನು ಅನಂತ ವರಧಾನ್ ಗೋಯೆಂಕ ಮಾಲೀಕತ್ವದ ಸಿಇಎಟಿ ಸಂಸ್ಥೆಯು ಪ್ರಸ್ತುತ ಪಡೆಸಿದ್ದು, ಈ ಕೂಡಲೇ ಈ ಜಾಹೀರಾತನ್ನು ಹಿಂಪಡೆಯಬೇಕು ಹಾಗೂ ಹಿಂದೂಗಳೇ ಆಗಿರುವ ಅವರು ಹಿಂದುಗಳ ಭಾವನೆಗಳಿಗೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕಾಗಿ ಆಗ್ರಹಿಸುತ್ತೇನೆ ಎಂದಿದ್ದಾರೆ.

ಸಂಸದ ಅನಂತ್ ಕುಮಾರ್ ಹೆಗಡೆ ಈ ಪತ್ರವನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲೂ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.