ಮೈಸೂರಿನಲ್ಲಿ ಡಬಲ್ ಮರ್ಡರ್: ಮಗನಿಂದಲೇ ತಂದೆ ಮತ್ತು ತಂದೆಯ ಪ್ರೇಯಸಿಯ ಕೊಲೆ
ತಂದೆ ಮತ್ತು ತಂದೆಯ ಪ್ರೇಯಸಿಯನ್ನು ಮಗನೇ ಹತ್ಯೆಗೈದ ಘಟನೆ ಮೈಸೂರು ಹೊರವಲಯದ ಶ್ರೀ ನಗರದಲ್ಲಿ ನಡೆದಿದೆ.

ಮೈಸೂರು: ತಂದೆ ಮತ್ತು ತಂದೆಯ ಪ್ರೇಯಸಿಯನ್ನು ಮಗನೇ ಹತ್ಯೆಗೈದ ಘಟನೆ ಮೈಸೂರು ಹೊರವಲಯದ ಶ್ರೀ ನಗರದಲ್ಲಿ ನಡೆದಿದೆ.
ಶಿವಪ್ರಕಾಶ್ ಮತ್ತು ಲತಾರನ್ನು ಹತ್ಯೆಗೈದು ಪುತ್ರ ಸಾಗರ್ ಪರಾರಿಯಾಗಿದ್ದಾನೆ. ಲತಾ ಮನೆಗೆ ನುಗ್ಗಿದ ಸಾಗರ್ ಮಚ್ಚಿನಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಲತಾ ಮೇಲೆ ಹಲ್ಲೆ ನಡೆಸುವಾಗ ಆಕೆಯ ಪುತ್ರ ನಾಗಾರ್ಜುನ್ ಗೂ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಸಾಗರ್ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


