ತುಮಕೂರು: ಕುಡಿದು ಶಾಲಾ ವಾಹನ ಚಾಲನೆ, ಬಸ್ ಪಲ್ಟಿ; 8 ವಿದ್ಯಾರ್ಥಿಗಳಿಗೆ ಗಾಯ
ಶಾಲಾ ವಾಹನ ಪಲ್ಟಿಯಾದ ಹಿನ್ನೆಲೆಯಲ್ಲಿ ಸುಮಾರು 8 ವಿದ್ಯಾರ್ಥಿಗಳು ಗಾಯಗೊಂಡಿದ್ದು 15 ಶಾಲಾ ಮಕ್ಕಳು ಅಪಾಯದಿಂದ ಪಾರಾಗಿರುವ ಘಟನೆ ಕೊರಟಗೆರೆಯಲ್ಲಿ ನಡೆದಿದೆ.

ತುಮಕೂರು: ಶಾಲಾ ವಾಹನ ಪಲ್ಟಿಯಾದ ಹಿನ್ನೆಲೆಯಲ್ಲಿ ಸುಮಾರು 8 ವಿದ್ಯಾರ್ಥಿಗಳು ಗಾಯಗೊಂಡಿದ್ದು 15 ಶಾಲಾ ಮಕ್ಕಳು ಅಪಾಯದಿಂದ ಪಾರಾಗಿರುವ ಘಟನೆ ಕೊರಟಗೆರೆಯಲ್ಲಿ ನಡೆದಿದೆ.
ಇದು ಎಸ್ವಿಜಿ ಶಾಲೆಗೆ ಸೇರಿದ ವ್ಯಾನ್ ಎನ್ನಲಾಗಿದ್ದು, ಗಾಯಗೊಂಡ ವಿದ್ಯಾರ್ಥಿಗಳನ್ನು ಕೊರಟಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂವರು ಮಕ್ಕಳಿಗೆ ತಲೆಗೆ ಗಾಯವಾಗಿದ್ದು ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಚಾಲಕ ಮದ್ಯ ಸೇವನೆ ಮಾಡಿ ಅತಿವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದ್ದು, ಬೆಳಗ್ಗೆ 11 ಗಂಟೆ ಸಮಯಕ್ಕೆ ಘಟನೆ ನಡೆದಿದೆ.
ವ್ಯಾನ್ ಬೆಳಿಗ್ಗೆ 8 ಗಂಟೆಗೆ ನಮ್ಮ ಗ್ರಾಮಕ್ಕೆ ಬರಬೇಕಿತ್ತು ಆದರೆ 10 ಗಂಟೆಗೆ ಬಂದಿತು ಮತ್ತು ಚಾಲಕ ಗೋವಿಂದ ಕುಡಿದಿದ್ದನು ಎಂದು ಮಕ್ಕಳು ಆರೋಪಿಸಿದ್ದಾರೆ. ವ್ಯಾನ್ ಜಿಗ್ ಜಾಗ್ ರೀತಿಯಲ್ಲಿ ಚಲಿಸಲು ಪ್ರಾರಂಭಿಸಿತು ಮತ್ತು ಅಂತಿಮವಾಗಿ ಉರುಳಿ ಬಿತ್ತು.
ಆರೋಪಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಸ್ಥಳೀಯರು ಮಕ್ಕಳನ್ನು ರಕ್ಷಿಸಿದ್ದಾರೆ. ಗಾಬರಿಗೊಂಡ ಪೋಷಕರು ಆಸ್ಪತ್ರೆಗೆ ಧಾವಿಸಿದರು. ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಅಪಘಾತ ಸ್ಥಳದಿಂದ ಪರಾರಿಯಾಗಿದ್ದಾನೆ.ಘಟನೆ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ten #students had a miraculous escape when their speeding #school bus toppled in Koratagere taluk (#Tumakuru district), 85 km from #Bengaluru.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


