ರಾಜ್ಯ

ಬೆಳಗಾವಿ: ಬ್ಲಾಕ್ ಫಂಗಸ್ ಗೆ  ಪತ್ನಿ ಬಲಿ, ನಾಲ್ವರು ಮಕ್ಕಳಿಗೆ ವಿಷವುಣಿಸಿ ಮಾಜಿ ಸೈನಿಕ ಆತ್ಮಹತ್ಯೆಗೆ ಶರಣು

ಬ್ಲಾಕ್ ಫಂಗಸ್ ನಿಂದ ಪತ್ನಿಯನ್ನು ಕಳೆದುಕೊಂಡು ದು:ಖದಲ್ಲಿದ್ದ ಮಾಜಿ ಸೈನಿಕರೊಬ್ಬರು ತನ್ನ ನಾಲ್ವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹುಕ್ಕೇರಿ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬೆಳಗಾವಿ: ಬ್ಲಾಕ್ ಫಂಗಸ್ ಗೆ  ಪತ್ನಿ ಬಲಿ, ನಾಲ್ವರು ಮಕ್ಕಳಿಗೆ ವಿಷವುಣಿಸಿ ಮಾಜಿ ಸೈನಿಕ ಆತ್ಮಹತ್ಯೆಗೆ ಶರಣು
ಸಾಂದರ್ಭಿಕ ಚಿತ್ರ
Published On :

ಬೆಳಗಾವಿ: ಬ್ಲಾಕ್ ಫಂಗಸ್ ನಿಂದ ಪತ್ನಿಯನ್ನು ಕಳೆದುಕೊಂಡು ದು:ಖದಲ್ಲಿದ್ದ ಮಾಜಿ ಸೈನಿಕರೊಬ್ಬರು ತನ್ನ ನಾಲ್ವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹುಕ್ಕೇರಿ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಗೋಪಾಲ ಹಾದಿಮನಿ (46) ತನ್ನ ನಾಲ್ವರು ಮಕ್ಕಳಾದ  ಸೌಮ್ಯಾ ಹಾದಿಮನಿ (19), ಶ್ವೇತಾಹಾದಿಮನಿ (16), ಸಾಕ್ಷಿ ಹಾದಿಮನಿ (11), ಸೃಜನ ಹಾದಿಮನಿಗೆ (8)  ಶುಕ್ರವಾರ ರಾತ್ರಿ ವಿಷವುಣಿಸಿ,  ತಾನೂ ಕೂಡಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶನಿವಾರ ಬೆಳಗ್ಗೆ ಕುಟುಂಬದ ಯಾವೊಬ್ಬ ಸದಸ್ಯರು ಮನೆಯಿಂದ ಹೊರಗೆ ಬಾರದನ್ನು ಗಮನಿಸಿದ ನೆರೆಹೊರೆಯವರು ಪೊಲೀಸರು ಹಾಗೂ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. 

ಗೋಪಾಲ್‌ ಪತ್ನಿ ಜಯಾ ಬ್ಲಾಕ್ ಫಂಗಸ್ ಗೆ ಜುಲೈ ತಿಂಗಳಲ್ಲಿ ಬಲಿಯಾಗಿದ್ದರು. ಇದರಿಂದ ಅವರು ಮನನೊಂದಿದ್ದರು. ಪತ್ನಿ ಇಲ್ಲದೆ ಬದುಕಲು ಆಗಲ್ಲ ಎಂದು ಅವರು ಹೇಳುತ್ತಿದ್ದರು. ಹೀಗಾಗಿ ಅವರು  ನಾಲ್ವರು ಮಕ್ಕಳ ಜೊತೆಗೆ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ. 

ಮೃತ ದುರ್ದೈವಿ ಗೋಪಾಲ್ ಹಾದಿಮನಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು ಎಂದು ಹೇಳಲಾಗಿದೆ. ಇಬ್ಬರು ಮಕ್ಕಳು ಸಂಕೇಶ್ವರ ಪಟ್ಟಣದಲ್ಲಿರುವ ಕಾಲೇಜಿಗೆ ಹೋಗುತ್ತಿದ್ದರು. ಇನ್ನೂಳಿದ ಇಬ್ಬರು ಮಕ್ಕಳು ಗ್ರಾಮದಲ್ಲೇ ಶಾಲೆಗೆ ಹೋಗುತ್ತಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಸಂಕೇಶ್ವರ ಪೊಲೀಸ್ ಠಾಣೆ ಪೊಲೀಸರು, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.