ರಾಜ್ಯ

ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್: ಇಬ್ಬರ ಸಾವು, 20 ಮಂದಿಗೆ ಗಾಯ

ಮದುವೆ ದಿಬ್ಬಣದ ಬಸ್ಸೊಂದು ಕಂದಕ್ಕೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ, 20 ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಘಾಟಿ ಬಳಿ ನಡೆದಿದೆ.

ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್: ಇಬ್ಬರ ಸಾವು, 20 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಮದುವೆ ದಿಬ್ಬಣದ ಬಸ್ಸೊಂದು ಕಂದಕ್ಕೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ, 20 ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಘಾಟಿ ಬಳಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಘಾಟಿ ಬಳಿ ಮದುವೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡು ಖಾಸಗಿ ಬಸ್ ತಡರಾತ್ರಿ ಕಂದಕ್ಕೆ ಬಿದ್ದು ಇಬ್ಬರು ಮೃತಪಟ್ಟಿದ್ದು 20 ಜನರು ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದ್ದನ್ನು ಗಮನಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.  

ಏನಿದು ಘಟನೆ?
ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯಕ್ಕೆ ಮದುವೆ ಮುಗಿಸಿ ವಾಪಸ್ ಆಗ್ತಿರುವಾಗ ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ಇಬ್ಬರು ಮೃತಪಟ್ಟು, 20 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಬೆಂಗಳೂರು, ಗೌರಿಬಿದನೂರು, ಚಿಕ್ಕಬಳ್ಳಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.