ರಾಜ್ಯ

ರಾಜ್ಯದಲ್ಲಿ 9,136 ಕೋಟಿ 89 ಲಕ್ಷ ರೂ. ಕೃಷಿ ಸಾಲ ನೀಡಿಕೆ- ಸಚಿವ ಎಸ್. ಟಿ. ಸೋಮಶೇಖರ್ 

ಪ್ರಸಕ್ತ ಸಾಲಿನಲ್ಲಿ 12, 35, 033 ರೈತರಿಗೆ 9, 136 ಕೋಟಿ 89 ಲಕ್ಷ ರೂಪಾಯಿ ಕೃಷಿ ಸಾಲವನ್ನು ನೀಡಲಾಗಿದೆ ಎಂದು ಸಹಕಾರ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಹೇಳಿದ್ದಾರೆ.

ರಾಜ್ಯದಲ್ಲಿ 9,136 ಕೋಟಿ 89 ಲಕ್ಷ ರೂ. ಕೃಷಿ ಸಾಲ ನೀಡಿಕೆ- ಸಚಿವ ಎಸ್. ಟಿ. ಸೋಮಶೇಖರ್ 
ಎಸ್.ಟಿ. ಸೋಮಶೇಖರ್
Published On :

ಬೆಂಗಳೂರು: ರೈತರ ಸ್ವಾವಲಂಬಿ ಬದುಕಿಗೆ ಪೂರಕವಾಗಿ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಹಾಕಿಕೊಂಡಿದ್ದು, ಪ್ರಸಕ್ತ ಸಾಲಿನಲ್ಲಿ 12, 35, 033 ರೈತರಿಗೆ 9, 136 ಕೋಟಿ 89 ಲಕ್ಷ ರೂಪಾಯಿ ಕೃಷಿ ಸಾಲ ನೀಡಲಾಗಿದೆ ಎಂದು ಸಹಕಾರ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಹೇಳಿದ್ದಾರೆ.

ರೈತರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳುವುದೇ  ಸರ್ಕಾರದ ಉದ್ದೇಶವಾಗಿದೆ. ಕಳೆದ ಬಾರಿ ಕೃಷಿ ಸಾಲ ವಿತರಣೆಯಲ್ಲಿ ಶೇ. 115 ರಷ್ಟು ಸಾಧನೆ ಮಾಡಲಾಗಿದ್ದು, ಈ ಬಾರಿ  ಶೇಕಡಾ 125 ರಷ್ಟು ಸಾಧನೆ ಮಾಡುವ ಗುರಿ ಹಾಕಿಕೊಳ್ಳಲಾಗಿದೆ. ಅಕ್ಟೋಬರ್ ತಿಂಗಳಲ್ಲಿನಲ್ಲಿಯೇ  ಅಲ್ಪಾವಧಿ, ಮಧ್ಯಮಾವಧಿ ಹಾಗೂ ಧೀರ್ಘಾವಧಿ ಸಾಲ ನೀಡಿಕೆಯಲ್ಲಿ ಗಮನಾರ್ಹ ಸಾಧನೆ ಮಾಡಲಾಗಿದೆ ಎಂದು ತಿಳಿಸಿದರು.

 ಶೀಘ್ರದಲ್ಲಿಯೇ ಡಿಸಿಸಿ ಬ್ಯಾಂಕ್ ಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಕರೆದು ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುವುದು, ಈ ಮೂಲಕ ಬ್ಯಾಂಕ್ ಗಳನ್ನು ತೋರಿರುವ ಸಾಧನೆ, ಎದುರಿಸುತ್ತಿರುವ ಸಣ್ಣಪುಟ್ಟ ತೊಡಕುಗಳು, ಸಮಸ್ಯೆಗಳ ಬಗ್ಗೆಯೂ ಚರ್ಚಿಸಿ ಪರಿಹಾರಗಳನ್ನು ಸೂಚಿಸಲಾಗುವುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.